ಅನುಮತಿ ಇಲ್ಲದೇ ಅಕ್ರಮವಾಗಿ ಗಣಿಗಾರಿಕೆ ಮಾಡುತ್ತಿದ್ದಾರೆ -ಸಂಸದೆ ಸುಮಲತಾ

ಮೈಸೂರು: ಅನುಮತಿ ಇಲ್ಲದೇ ಅಕ್ರಮವಾಗಿ ಗಣಿಗಾರಿಕೆ ಮಾಡುತ್ತಿದ್ದಾರೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.

ಮೈಸೂರಲ್ಲಿ ಬುಧವಾರ ಅವರು ಮಾಧ್ಯಮ ಪ್ರತಿನಿಧಿಗಳೂಂದಿಗೆ ಮಾತನಾಡಿದರು.

ಲೈಸೆನ್ಸ್ ಅವಧಿ ಮುಗಿದರೂ ಅಕ್ರಮವಾಗಿ ಗಣಿಗಾರಿಕೆ ಮಾಡುತ್ತಿದ್ದಾರೆ ಎಂದು ಸುಮಲತಾ ಅಂಬರೀಶ್ ಆರೋಪಿಸಿದರು.

ಸರ್ಕಾರಕ್ಕೆ ಬರಬೇಕಿದ್ದ ರಾಜಧನ ಸರಿಯಾಗಿ ಬರ್ತಿಲ್ಲ. ಅಕ್ರಮ ಗಣಿಗಾರಿಕೆಯಿಂದ ಕೆಆರ್ ಎಸ್ ಡ್ಯಾಂನಲ್ಲಿ ಬಿರುಕು ಬಗ್ಗೆ ದಿಶಾ ಸಭೆಯಲ್ಲಿ ಪ್ರಶ್ನಿಸಿದ್ದೆ. ಕೆಆರ್ ಎಸ್ ಡ್ಯಾಂನಲ್ಲಿ ಬಿರುಕು ಬಿಟ್ಟಿದೆಯಾ ಎಂದು ಪ್ರಶ್ನಿಸಿದ್ದೆ. ಇದನ್ನ ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.

ಅಕ್ರಮ ಗಣಿಗಾರಿಕೆಯಿಂದ ಕೆಆರ್ ಎಸ್ ಡ್ಯಾಂನಲ್ಲಿ ಬಿರುಕು ಸಂಬಂಧ ರೈತರು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದರು. ಸ್ಪೋಟಕ ಬಳಕೆಯಿಂದ ಬಿರುಕು ಎಂದು ಆತಂಕ ವ್ಯಕ್ತಪಡಿಸಿದ್ದು ತಪ್ಪಾ..? ಇಲ್ಲ ಸುಮ್ಮನಿರಬೇಕಿತ್ತಾ..? ನಾನು ಎಲ್ಲೂ ಸಹ ಕೆಆರ್ ಎಸ್ ಬಿರುಕು ಬಿಟ್ಟಿದೆ ಎಂದು ಹೇಳಿಲ್ಲ. ಸಂಸದೆಯಾಗಿ ದಿಶಾಸಭೆಯಲ್ಲಿ ಪ್ರಶ್ನಿಸಿದ್ದೆ ಎಂದು ಸುಮಲತಾ ಅವರು ತಿಳಿಸಿದರು.