ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ರವರದು ಎನ್ನಲಾದ ಆಡಿಯೋ ಅವರದಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹಾಗು ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಸೋಮವಾರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ನಾನು ರಾಜ್ಯಾಧ್ಯಕ್ಷರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಇದು ನಕಲಿ ಆಡಿಯೋ ಆಗಿದ್ದು, ರಾಜ್ಯಾಧ್ಯಕ್ಷರ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎಂದರು.
ಈ ಬಗ್ಗೆ ಪತ್ರ ಬರೆಯಲಾಗಿದೆ. ಮುಖ್ಯಮಂತ್ರಿ ಇದರ ಬಗ್ಗೆ ತನಿಖೆಗೆ ಒತ್ತು ನೀಡಲಿದ್ದಾರೆ ಎಂದವರು ತಿಳಿಸಿದರು.
ಇನ್ನು ಸಿಎಂ ಆಗಿ ಯಡಿಯೂರಪ್ಪ ನವರೇ ಮುಂದುವರೆಯುತ್ತಾರೆ ಎಂದು ನಳೀನ್ ಕುಮಾರ್ ಕಟೀಲ್ ರವರೇ ಹೇಳಿ ಯಡಿಯೂರಪ್ಪ ನವರ ವಿರುದ್ಧ ಮಾತನಾಡಿದವರಿಗೆ ನೋಟಿಸ್ ನೀಡಿ ಎಚ್ಚರಿಕೆ ನೀಡಿದ್ದರು. ಇನ್ನು ನಳೀನ್ ಕುಮಾರ್ ಕಟೀಲ್ ರವರದು ಎನ್ನಲಾದ ಆಡಿಯೋದಿಂದ ಅವರಿಗೆ ಬೇಸರ ಆಗಿದೆ. ಇದು ಕಾಂಗ್ರೆಸ್ ನವರ ಕುತಂತ್ರ ಎಂದು ಅವರು ಆರೋಪಿಸಿದರು.

