ಮೈಸೂರು: ವ್ಯಾಪಕ ಭ್ರಷ್ಟಾಚಾರ ನಡೆಸಿದ್ದೇ ಯಡಿಯೂರಪ್ಪ ಸಾಧನೆಯಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು.
ಮೈಸೂರಿನಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಲಕ್ಷ್ಮಣ್ ಮಾತನಾಡಿದರು.
ಎರಡು ವರ್ಷದಲ್ಲಿ ಬಿಜೆಪಿ ಸರ್ಕಾರ 30 ಸಾವಿರ ಕೋಟಿ ಲೂಟಿ ಮಾಡಿದೆ ಎಂದು ಅವರು ಆರೋಪ ಮಾಡಿದರು.
ಮುಖ್ಯಮಂತ್ರಿ ಮಾತ್ರವಲ್ಲ ಇಡೀ ಭ್ರಷ್ಟ ಸಚಿವ ಸಂಪುಟವೇ ಹೋಗಬೇಕೆಂಬುದು ಕೆಪಿಸಿಸಿ ನಿಲುವಾಗಿದೆ ಎಂದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭ್ರಷ್ಟ ರಹಿತ ಮುಖ್ಯಮಂತ್ರಿ ಅಲ್ಲ. ಅವರು ಎರಡು ವರ್ಷದ ಸಾಧನೆ ಏನು ಅಂತ. 26 ರಂದು ಹೇಳುತ್ತಾರೆ. ಅವರ ಸಾಧನೆ ಪಟ್ಟಿಯನ್ನು ನಾವು ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದರು.
ವೀರಶೈವ ಲಿಂಗಾಯತರು ಇದುವರೆಗೂ ಬಿಜೆಪಿ ಯನ್ನು ಬೆಂಬಲಿಸಿ ತಪ್ಪು ಮಾಡಿದ್ದಾರೆ.ಕಾಂಗ್ರೆಸ್ ಪಕ್ಷ ಜಾತ್ಯಾತೀತ ಪಕ್ಷವಾಗಿದೆ.ವೀರಶೈವ ಲಿಂಗಾಯತರು ಇನ್ನು ಮುಂದಾದರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದರು.
ಯಡಿಯೂರಪ್ಪನವರ ಕುರಿತು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಎಂ ಬಿ ಪಾಟೀಲ್ ನೀಡಿರುವ ಹೇಳಿಕೆಗಳು ಅವರ ವೈಯುಕ್ತಿಕ ಹೇಳಿಕೆಗಳು. ಅವರ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಎಂದರು.
ಎಂ.ಬಿ.ಪಾಟೀಲ್ ಹಾಗೂ ಶ್ಯಾಮನೂರು ಶಿವಶಂಕರಪ್ಪ ಅವರಿಗೆ ಪಕ್ಷದಿಂದ ನೋಟಿಸ್ ಕೊಟ್ಟು ಸ್ಪಷ್ಟನೆಯನ್ನು ಪಕ್ಷ ಕೇಳಲಿದೆ ಎಂದವರು ತಿಳಿಸಿದರು.
ಶಾಮನೂರು ಶಿವಶಂಕರಪ್ಪ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರು. ಸಮಾಜದ ಅಧ್ಯಕ್ಷರಾಗಿ ಹೇಳಿಕೆ ನೀಡಿದ್ದಾರೆ. ಆದರೆ ಇದನ್ನು ಟೀಕಿಸಿರುವ ಎಚ್ ವಿಶ್ವನಾಥ್ ಯಾವ ಪಕ್ಷದಲ್ಲಿದ್ದಾರೆ ಎಂದು ಹೆಚ್ ವಿಶ್ವನಾಥ್ ನಡೆಯನ್ನು ಪ್ರಶ್ನಿಸಿದರು.
ಕಾಂಗ್ರೆಸ್ ತ್ಯಜಿಸಿ ಬಿಜೆಪಿಗೆ ಹೋಗಿರುವವರಿಗೆ ಮುಂದಿನ ದಿನಗಳಲ್ಲಿ ಯಾವುದೇ ಸ್ಥಾನಮಾನ ಸಿಗದು. ಈ 17 ಜನರು ಸಚಿವ ಸ್ಥಾನ ಕಳೆದುಕೊಂಡು ಬೇತಾಳದಂತೆ ಆಗಲಿದ್ದಾರೆ ಎಂದು ವ್ಯಂಗ್ಯವಾಡಿದರು.
ನಳೀನ್ ಕುಮಾರ್ ಕಟೀಲು ಆಡಿಯೋ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಎಲ್ಲದಕ್ಕೂ ಕಾಂಗ್ರೆಸ್ ಕಾರಣ ಎಂಬ ಸಚಿವ ಆರ್. ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದ ಅವರು ನಿಮ್ಮ ಮನೆಯಲ್ಲಿ ನಡೆಯುವ ವಿಚಾರಕ್ಕೆ ನಾವು ಹೇಗೆ ಹೊಣೆಯಾಗುತ್ತೇವೆ? ನಿಮಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಸಿದ್ದರಾಮಯ್ಯ ಮತ್ತು ಡಿಕೆಶಿವಕುಮಾರ್ ನಡುವೆ ತಂದು ಹಾಕುವ ಕೆಲಸ ಮಾಡುತ್ತಿದ್ದೀರಾ ಎಂದರು.
ಸುದ್ದಿಗೋಷ್ಠಿಯಲ್ಲಿ ನಗರಾಧ್ಯಕ್ಷ ಆರ್.ಮೂರ್ತಿ, ಕಾಂಗ್ರೆಸ್ ಮುಖಂಡರಾದ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

