ದಲಿತರನ್ನ ಸಿಎಂ ಮಾಡುವಂತೆ ನಳೀನ್ ಕುಮಾರ್ ಕಟೀಲ್ ಗೆ ಸಿದ್ಧರಾಮಯ್ಯ ಸವಾಲು

ಮಂಗಳೂರು: ಯಡಿಯೂರಪ್ಪ ರಾಜಿನಾಮೆ ನೀಡಿದ ನಂತರ ದಲಿತರನ್ನೇ ಮುಖ್ಯಮಂತ್ರಿ ಮಾಡಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಸವಾಲು ಹಾಕಿದ್ದಾರೆ.

ಮಂಗಳೂರಿನಲ್ಲಿ ಶುಕ್ರವಾರ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ದಲಿತರನ್ನ ಸಿಎಂ ಮಾಡಲಿ ಅಂತ ಕಟೀಲ್ ಅವರು ನನಗೆ ಹೇಳಿದ್ದರು. ನಮ್ಮಲ್ಲಿ ದಲಿತರು ಸಿಎಂ ಆಗಿದ್ದಾರೆ. ಈಗ ಬಿಜೆಪಿ ಅವರಿಗೆ ಆ ಅವಕಾಶ ಇದೆ. ನಳೀನ್ ಕುಮಾರ್ ಕಟೀಲ್ ದಲಿತರನ್ನ ಸಿಎಂ ಮಾಡಲಿ ಎಂದು ಹೇಳಿದರು.

ಸಿಎಂ ಬಿಎಸ್ ವೈ ಬೆಂಬಲಕ್ಕೆ ಮಠಾಧೀಶರ ಬೆಂಬಲ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಯಾವುದೇ ಮಠಾಧೀಶರು ರಾಜಕಾರಣಕ್ಕೆ ಕೈ ಹಾಕಬಾರದು. ಇಲ್ಲಿ ಜನಾಭಿಪ್ರಾಯ ಬಹಳ ಮುಖ್ಯ, ಪಕ್ಷದ ಒಳಗಿನ ವಿಚಾರಕ್ಕೆ ಯಾರೂ ಕೈ ಹಾಕಬಾರದು ಎಂದು ಹೇಳಿದರು.

ಜನಗಳ ಬಗ್ಗೆ ಬಿಜೆಪಿಗೆ ಕಾಳಜಿ ಇಲ್ಲ. ಈಗ ಎಲ್ಲಾ ಕಡೆ ಮಳೆ ಬಂದು ಜನ, ಜಾನುವಾರು ಕೊಚ್ಚಿ ಹೋಗಿವೆ. ಈಗ ಸರ್ಕಾರ ಯುದ್ಧೋಪಾದಿಯಲ್ಲಿ ಕೆಲಸ ಮಾಡೋ ಬದಲು ಸಿಎಂ ಬದಲಾವಣೆ ಮಾಡುವ ಪ್ರಯತ್ನದಲ್ಲಿ ಇದ್ದಾರೆ. ಈಗ ಯಡಿಯೂರಪ್ಪರನ್ನ ಚೇಂಜ್ ಮಾಡ್ತಾರೆ, ಆದ್ರೆ ಮುಂದೆ ಸಿಎಂ ಆಗುವವರೂ ಭ್ರಷ್ಟರೇ ಆಗಿರುತ್ತಾರೆ ಎಂದು ಸಿದ್ಧರಾಮಯ್ಯ ಟೀಕಿಸಿದರು.