ಮೈಸೂರು: ಮಾನವ ಜನ್ಮವನ್ನು ವ್ಯರ್ಥಮಾಡಿಕೊಳ್ಳದೆ ಸದುಪಯೋಗಪಡಿಸಿಕೊಳ್ಳಬೇಕಾದರೆ ಗುರುವಿನ ಅನುಗ್ರಹಬೇಕು ಎಂದು ಬಿಜೆಪಿ ನಗರ ಅಧ್ಯಕ್ಷ ಟಿ ಎಸ್ ಶ್ರೀವತ್ಸ ತಿಳಿಸಿದರು.
ನಗರದ ಚಾಮುಂಡಿಪುರಂ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ಗುರುಪೂರ್ಣಿಮೆ ಅಂಗವಾಗಿ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಮ್ಮಲ್ಲಿರುವ ಚಂಚಲ ಬುದ್ಧಿ ಹೋಗಲಾಡಿಸಲು ಗುರುಗಳ ಧ್ಯಾನ ಮಾಡುತ್ತಾ ಆತ್ಮ ಚಿಂತನೆಯನ್ನು ಮಾಡಬೇಕು ಎಂದರು.
ನಂತರ ಮಾತನಾಡಿದ ಹಿರಿಯ ಸಮಾಜ ಸೇವಕರಾದ ಕೆ ರಘುರಾಂ ವಾಜಪೇಯಿ ಭಾರತ ಸಂಸ್ಕೃತಿಯಲ್ಲಿ ಗುರು ಶಿಷ್ಯ ಪರಂಪರೆ ಮಹತ್ವವನ್ನು ಪಡೆದುಕೊಂಡಿದೆ. ಗುರುಗಳಿಗೆ ಗೌರವ, ಪೂಜ್ಯ ಭಾವನೆ ಇತ್ತು. ಜತೆಗೆ ಗುರುವನ್ನು ದೇವರ ಸಮಾನ ಎಂದು ಪೂಜಿಸಿದ್ದ ಸಂಸ್ಕೃತಿ ನಮ್ಮದಾಗಿದೆ. ಇಂತಹ ಪರಂಪರೆಯನ್ನು ಉಳಿಸಿ ಬೆಳೆಸುತ್ತಿರುವ ಈ ಯುವಕರ ಕಾರ್ಯ ಮಹತ್ವವಾಗಿದೆ ಎಂದರು.
ಪೆÇ್ರ. ಡಾ. ರಾಮಮೂರ್ತಿರಾವ್ (ಭರತ್ಯನಾಟ್ಯ ಶಿಕ್ಷಕರು), ವಿದ್ವಾನ್ ಡಾ. ಶೆಲ್ವಪಿಳ್ಳೆ ಅಯ್ಯಂಗಾರ್ (ಸಂಸ್ಕೃತ ಶಿಕ್ಷಕರು), ಡಾ. ಮುರಳಿ (ಪ್ರಾಧ್ಯಾಪಕರು. ಶಿಕ್ಷಣ ತಜ್ಞರು), ಡಾ. ರಾಘವೇಂದ್ರ ಪೈ (ಯೋಗ ಶಿಕ್ಷಕರು), ವಿದ್ವಾನ್ ನರಸಿಂಹನ್ (ವೇದ ಶಿಕ್ಷಕರು), ಮಾಲಾಶ್ರೀ ಜೆ. ಜಯಸಿಂಹ (ಸಂಗೀತ ಶಿಕ್ಷಕರು) ಅವರುಗಳನ್ನು ಈ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಪರಮಪೂಜ್ಯ ಇಳೈ ಆಳ್ವಾರ್ ಸ್ವಾಮೀಜಿ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ ಟಿ ಪ್ರಕಾಶ್, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ್ ಗೌಡ, ಕಾಮಾಕ್ಷಿ ಆಸ್ಪತ್ರೆಯ ಮುಖ್ಯಸ್ಥರಾದ ಮಹೇಶ್ ಶೆಣೈ, ನಗರ ಪಾಲಿಕಾ ಸದಸ್ಯ ಮಾ ವಿ ರಾಮ್ ಪ್ರಸಾದ್, ಎಂ ಸಿ ರಮೇಶ್, ಜಗದೀಶ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ನವೀನ್ ಕುಮಾರ್, ಕೃಷ್ಣರಾಜೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್, ಪತ್ರಕರ್ತ ಅನಿಲ್ ಕುಮಾರ್, ಜೋಗಿ ಮಂಜು, ಕೇಬಲ್ ಮಹೇಶ್, ಕಡಕೊಳ ಜಗದೀಶ್, ವಿಕ್ರಮ್ ಅಯ್ಯಂಗಾರ್ ಹಾಗೂ ಇನ್ನಿತರರು ಹಾಜರಿದ್ದರು.

