ನನ್ನನ್ನು ಮುಖ್ಯಮಂತ್ರಿ ಮಾಡುತ್ತಾರೆ ಎಂಬ ಬಗ್ಗೆ ಯಾರು ನನ್ನ ಜೊತೆ ಚರ್ಚೆ ಮಾಡಿಲ್ಲ -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ನನ್ನನ್ನು ಮುಖ್ಯಮಂತ್ರಿ ಮಾಡುತ್ತಾರೆ ಎಂಬ ಬಗ್ಗೆ ಯಾರು ನನ್ನ ಜೊತೆ ಚರ್ಚೆ ಮಾಡಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಶನಿವಾಋ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮತನಾಡಿದರು.

ಮುಖ್ಯಮಂತ್ರಿ ನೀವು ಆಗುತ್ತೀರಾ..? ಎಂಬ ಪ್ರಶ್ನೆಗೆ ನಿವೇ ಹೇಳಬೇಕು ಎಂದು ಪ್ರಲ್ಹಾದ್ ಜೋಶಿ ಉತ್ತರಿಸಿದರು.

ಯಡಿಯೂರಪ್ಪ ಮತ್ತು ಕೇಂದ್ರ ನಾಯಕರ ಮಧ್ಯೆ ಏನ್ ಮಾತುಕತೆ ನಡೆದಿದೆ ಅದರ ವಿವರ ನನಗೆ ಗೊತ್ತಿಲ್ಲ.
ಏನೇ ಮಾತುಕತೆ ನಡೆದಿದ್ದರು, ಯಡಿಯೂರಪ್ಪ ಹಾಗು ಕೇಂದ್ರ ನಾಯಕರಿಗೆ ಮಾತ್ರ ಗೊತ್ತು. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿದ್ದಾರೆ. ನರೇಂದ್ರ ಮೋದಿ ಇದ್ದಾರೆ ನಿರ್ಧಾರ ಅವರು ತೆಗೆದುಕೊಳ್ಳುತ್ತಾರೆಂದು ಜೋಶಿ ಹೇಳಿದರು.

ರಾಜ್ಯ ರಾಜಕಾರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಮುಖ್ಯಮಂತ್ರಿಗಳು ಈಗಾಗಲೇ ತಮ್ಮ ಹೇಳಿಕೆ ನೀಡಿದ್ದಾರೆ. ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ನಾನು ಸೂಕ್ತ ವ್ಯಕ್ತಿ ಅಲ್ಲ ಎಂದು ಅವರು ತಿಳಿಸಿದರು.