ರಾಜ್ಯದಲ್ಲಿ ಈಗ ಇರುವುದು ನಮ್ಮದೇ ಸರ್ಕಾರ -ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಈಗ ಇರುವುದು ನಮ್ಮದೇ ಸರ್ಕಾರ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ನಗರದಲ್ಲಿ ಗುರುವಾರ ಹೆಚ್. ಡಿ. ಕುಮಾರಸ್ವಾಮಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಈಗಿರುವ ಸರ್ಕಾರ ಜನತಾ ಪರಿವಾರದ ಸರ್ಕಾರ. ಇದು ನಮ್ಮದೇ ಸರ್ಕಾರ ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಮ್ಮದೇ ಪರಿವಾರದಿಂದ ಬಂದಿರುವವರು. ಈಗ ರಾಜ್ಯದಲ್ಲಿ ನಡೆಯುತ್ತಿರುವುದು ಜನತಾ ಪರಿವಾರ ಸರ್ಕಾರ ಎಂದು ತಿಳಿಸಿದರು.

ನಾನು ಸರ್ಕಾರವನ್ನ ಅಸ್ಥಿರಗೊಳಿಸುವುದಿಲ್ಲ. ಬಿ.ಎಸ್. ಯಡಿಯೂರಪ್ಪರಿಗೂ ನಾವು ಎಲ್ಲ ಸಹಕಾರ ನೀಡಿದ್ದೆವು. ಈಗ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೂ ಸಹಕಾರ ನೀಡುತ್ತೇವೆ ಎಂದು ಹೆಚ್. ಡಿ. ಕೆ ಹೇಳಿದರು.