ಕೊರೊನಾ ನಿಯಂತ್ರಣಕ್ಕೆ ಗಡಿ ಭಾಗದಲ್ಲಿ ಬಿಗಿ ಕ್ರಮಕ್ಕೆ ಸೂಚಿಸಿದ್ದೇನೆ -ಸಿಎಂ ಬೊಮ್ಮಾಯಿ

ನವದೆಹಲಿ: ಕೇರಳ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿಭಾಗಗಳಲ್ಲಿ ಬಿಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನವ ದೆಹಲಿಯಲ್ಲಿ ಶುಕ್ರವಾರ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ರಾಜ್ಯದ ಗಡಿಭಾಗದಲ್ಲಿ ಬಿಗಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

ಈ ಕುರಿತು ಮೈಸೂರು, ಚಾಮರಾಜನಗರ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ರಾಜ್ಯಕ್ಕೆ ವಾಪಸ್ ಆದ ಬಳಿಕ ಕೊರೊನಾ ನಿಯಂತ್ರಣ ಸಂಬಂಧ ಅಧಿಕಾರಿಗಳ ಜತೆ ಚರ್ಚಿಸುತ್ತೇನೆ ಎಂದು ಸಿಎಂ ತಿಳಿಸಿದರು.