ಮೈಸೂರು: ನಾನು ಸಚಿವ ಸಂಪುಟಕ್ಕೆ ಸೇರುವುದು ಬಿಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಮೈಸೂರಲ್ಲಿ ಶುಕ್ರವಾರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ನೂತನ ಸಚಿವ ಸಂಪುಟದಲ್ಲಿ ಇರಬೇಕ ಇಲ್ಲವ ಎಂಬುದು ನಾನು ತೆಗೆದುಕೊಳ್ಳುವ ನಿರ್ಧಾರವಲ್ಲ ಎಂದು ಈಶ್ವರಪ್ಪನವರು ಹೇಳಿದರು.
ಬಿಜೆಪಿಯಲ್ಲಿ ಒಂದು ವ್ಯವಸ್ಥೆ ಇದೆ ಸಿಎಂ ರಾಜ್ಯಧ್ಯಕ್ಷ ಹಾಗೂ ಕೇಂದ್ರ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ.
ಅವರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧ ಎಂದರು.
ಜಗದೀಶ್ ಶೆಟ್ಟರ್ ಅವರು ಹಿರಿಯರಾಗಿದ್ದಾರೆ. ತಮ್ಮ ಜೂನಿಯರ್ ಕೆಳಗೆ ಸಂಪುಟದಲ್ಲಿ ಇರುವುದಿಲ್ಲ ಎನ್ನುವ ತೀರ್ಮಾನ ಮಾಡಿದ್ದಾರೆ. ಇದಕ್ಕು ಕಟೀಲ್ ಅವರದ್ದು ಎನ್ನಲಾಗಿರುವ ಆಡಿಯೋಕ್ಕೂ ಸಂಬಂಧ ಇಲ್ಲ ಎಂದು ಈಶ್ವರಪ್ಪ ತಿಳಿಸಿದರು.

