ಈ ರಾಜ್ಯಕ್ಕೆ ಬಿಜೆಪಿಯೇ ದೊಡ್ಡ ಶಾಪ -ಡಿ.ಕೆ.ಶಿವಕುಮಾರ್

ಮೈಸೂರು: ಈ ರಾಜ್ಯಕ್ಕೆ ಬಿಜೆಪಿಯೇ ದೊಡ್ಡ ಶಾಪ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಮೈಸೂರಲ್ಲಿ ಶನಿವಾರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ರಾಜ್ಯ ಬಿಜೆಪಿ ಸರ್ಕಾರ ಸೂಕ್ತ ಯೋಜನೆಗಳನ್ನು ಮಾಡಿಕೊಂಡಿಲ್ಲ. ರಾಜ್ಯಕ್ಕೆ ಯಾವ ರೀತಿ ಅಧಿಕಾರ ನೀಡಬೇಕು, ಈ ಕಷ್ಟದ ಕಾಲದಲ್ಲಿ ಯಾವುದಕ್ಕೆ ಆದ್ಯತೆ ನೀಡಬೇಕು ಎಂಬುದೂ ಗೊತ್ತಿಲ್ಲ ಎಂದು ಡಿಕೆಶಿ ಟೀಕಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮೈಸೂರಿಗೆ ಭೇಟಿ ನೀಡಿದ್ದಾರೆ. ಐದು ಜಿಲ್ಲೆಗಳ ಕಾಂಗ್ರೆಸ್ ಮುಖಂಡರೊಂದಿಗೆ ಪಕ್ಷ ಸಂಘಟನೆ ಸಂಬಂಧ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಇತರೆ ಗಣ್ಯರು ಭಾಗಿಯಾಗಲಿದ್ದಾರೆ.