ಕಾರವಾರ: ಬಿಜೆಪಿ ಸರ್ಕಾರವೇ ಸಂಪೂರ್ಣ ಭ್ರಷ್ಟವಾಗಿದ್ದು, ಇವರಷ್ಟು ಸಂಸ್ಕೃತಿ ಇಲ್ಲದ ಜನ ಬೇರೆ ಯಾರೂ ಇಲ್ಲ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಕಾರವಾರದಲ್ಲಿ ಸೋಮವಾರ ಸಿದ್ದರಾಮಯ್ಯನವರು ಮಾಧ್ಯಮ ಪ್ತಿನಿಧೀಗಳೊಂದಿಗೆ ಮಾತನಾಡಿದÀರು.
ಬಿಜೆಪಿಯವರು ತಮ್ಮನ್ನು ಅತ್ಯಂತ ಸುಸಂಸ್ಕೃತರು ಎಂದು ಹೇಳಿಕೊಳ್ತಾರೆ. ಆದರೆ, ಅವರಷ್ಟು ಸಂಸ್ಕೃತಿ ಇಲ್ಲದವರು ಮತ್ಯಾರೂ ಇಲ್ಲ. ಅವರು ಕಳ್ಳನ ಮನಸು ಹುಳ್ಳುಳುಗೆ ಎಂಬಂತೆ ಹೆಗಲು ಮುಟ್ಟಿ ನೋಡಿಕೊಳ್ಳುವವರು ಎಂದು ಟೀಕಿಸಿದರು.
ಬಿಜೆಪಿಯ ಹಲವು ನಾಯಕರು ತಮ್ಮ ವಿರುದ್ಧ ಸಿ.ಡಿ ಬಿಡುಗಡೆ ಮಾಡದಂತೆ ನ್ಯಾಯಾಲಯದ ಮೊರೆ ಹೋಗುತ್ತಿದ್ದಾರೆ. ಬಿಜೆಪಿ ಸರ್ಕಾರವೇ ಸಂಪೂರ್ಣ ಭ್ರಷ್ಟವಾಗಿದೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಯಾಕೆ ಕೆಳಗಿಳಿಸಿದರು ಎಂದು ಸಿದ್ಧರಾಮಯ್ಯ ಪ್ರಶ್ನಿಸಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ಅವರು, ಬೇರೆ ನಾಯಕರು ಯಾಕೆ ಕೋರ್ಟ್‍ಗೆ ಹೋಗ್ತಿಲ್ಲ? ಕೆಲವರದ್ದು ಮಾತ್ರ ಸಿ.ಡಿಗಳನ್ನು ಯಾಕೆ ಮಾಡ್ತಾರೆ? ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಮುಟ್ಟಿಕೊಂಡ್ರಂತೆ.. ಹಾಗಾಯ್ತು ಎಂದು ಹೇಳಿದರು.
ಕೋವಿಡ್ ಮೂರನೇ ಅಲೆ ತಡೆಯಲು ಸರ್ಕಾರವು ರಾಜ್ಯದ ಗಡಿಗಳಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದ ಸಿದ್ದರಾಮಯ್ಯನವರು, ಇಂಥ ಸಂಕಷ್ಟದ ಸಂದರ್ಭದಲ್ಲಿ ಸಂಪುಟ ರಚನೆ ಮಾಡಲು ಮುಖ್ಯಮಂತ್ರಿ ಪದೇ ಪದೇ ಹೈಕಮಾಂಡ್ ಭೇಟಿಗೆ ದೆಹಲಿಗೆ ಯಾಕೆ ಹೋಗಬೇಕು ಎಂದು ಪ್ರಶ್ನಿಸಿದರು.

