ಭದ್ರತಾ ಪಡೆಯಿಂದ ಉಗ್ರನೊಬ್ಬನ ಹತ್ಯೆ

ಶ್ರೀನಗರ: ಭಾರತೀಯ ಸೇನಾಪಡೆ ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಎನ್ ಕೌಂಟರ್ ನಡೆಸಿ ಓರ್ವ ಉಗ್ರನನ್ನು ಹತ್ಯೆಗೈದಿದೆ.

ಬಂಡಿಪೋರಾದ ಚಂದಾಜಿ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಬಗ್ಗೆ ದೊರೆತ ಮಾಹಿತಿ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದಾಗ ಉಗ್ರರು ಭದ್ರತಾಪಡೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾಪಡೆಗಳು ಎನ್ ಕೌಂಟರ್ ನಡೆಸಿ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ.

ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ.