ಮೈಸೂರು: ಮೈಸೂರಿನ ಕೃಷ್ಣರಾಜ (ಕೆ. ಆರ್.) ಕ್ಷೇತ್ರದ ಶಾಸಕ ಎಸ್. ಎ. ರಾಮದಾಸ್ ಅವರು ನೂತನ ಸಚಿವ ಸಂಪುಟ ಸದಸ್ಯರನ್ನು ಒಂದು ರೀತಿ ವಿಶೇಷವಾಗಿ ಅಭಿನಂದಿಸಿದ್ದಾರೆ.
ಈ ಕುರಿತು ಟ್ವೀಟ್ ನ್ನು ಮಾಡಿದ್ದಾರೆ ಶಾಸಕ ಎಸ್. ಎ. ರಾಮದಾಸ್.
ಪಕ್ಷ ಕಟ್ಟಿ ಬೆಳೆಸಿ, ಅರ್ಹತೆ ಹೊಂದಿ ಸಚಿವರಾಗಿ ಪ್ರಮಾಮಾಣವಚನ ತೆಗೆದುಕೊಳ್ಳುತ್ತಿರುವ ನೂತನ ಸಚಿವರಿಗೆ ಅಭಿನಂದನೆಗಳು.
ಕರ್ನಾಟಕವನ್ನು ದೇಶದಲ್ಲಿ ನಂ. 1 ಮಾಡಲು ತಾವೆಲ್ಲ ಶ್ರಮಿಸುತ್ತೀರೆಂದು ನಂಬಿರುತ್ತೇನೆ. ತಮ್ಮೆಲ್ಲರಿಗೂ ತಾಯಿ ಚಾಮುಂಡೇಶ್ವರಿ ಶುಭವನ್ನುಂಟು ಮಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶಾಸಕ ಎಸ್. ಎ. ರಾಮದಾಸ ಅವರು ಕನ್ನಡ ಹಾಗೂ ಇಂಗ್ಲೀಷ್ ನಲ್ಲಿ ಟ್ವೀಟ್ ಮಾಡಿದ್ದಾರೆ.

