ಬೆಂಗಳೂರು: ಕೋವಿಡ್ 3ನೇ ಅಲೆ ತಡೆಯುವ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಂಡಿರುವ ಸರ್ಕಾರ ಗಡಿಭಾಗದ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಪ್ಯೂ ಜಾರಿ ಮಾಡಿದ್ದು ನೈಟ್ ಕರ್ಪ್ಯೂ ಅವಧಿಯನ್ನು ರಾತ್ರಿ 9 ಗಂಟೆಗೆ ಜಾರಿಗೊಳಿಸಲು ತೀರ್ಮಾನಿಸಿದೆ.
ಗೃಹ ಕಚೇರಿ ಕೃಷ್ಣ ದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹಿರಿಯ ಅಧಿಕಾರಿಗಳ ಜತೆ ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಈ ಬಗ್ಗೆ ಮಾಹಿತಿ ನೀಡಿzರು.
ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದವರು ತಿಳಿಸಿ, ಕೇರಳ ಹಾಗೂ ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಪ್ಯೂ ಜಾರಿ ಮಾಡಲಾಗುವುದು ಎಂದರು.
ಉಳಿದಂತೆ ರಾಜ್ಯಾದ್ಯಂತ ಈಗಿರುವ ನೈಟ್ ಕರ್ಪ್ಯೂ ಅವಧಿಯನ್ನು ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ರವರೆಗೆ ಜಾರಿಮಾಡಲಾಗುವುದು ಎಂದು ತಿಳಿಸಿದರು.
ಕೇರಳ ಗಡಿ ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಾಮರಾಜನಗರ, ಕೊಡಗು. ಮಹಾರಾಷ್ಟ್ರ ಭಾಗದ ಗಡಿ ಜಿಲ್ಲೆಗಳಾದ ಬೆಳಗಾವಿ, ಕಲಬುರ್ಗಿ, ಬೀದರ್, ಬಾಗಲಕೋಟೆ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಪ್ಯೂ ಜಾರಿಯಾಗಲಿದೆ. ಅತ್ಯಂತ ಬಿಗಿ ಕ್ರಮ ಕೈಗೊಳ್ಳಲು ಪೆÇಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಶಿಕ್ಷಣ ತಜ್ಞರ ಜತೆ ಸಮಾಲೋಚನೆ ನಡೆಸಲಾಗಿದೆ. ಅವರ ಸಲಹೆಯಂತೆ ಆ. 23ರಿಂದ 9, 10 ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಪ್ರತ್ಯೇಕ ಬ್ಯಾಚ್ ಗಳಲ್ಲಿ ತರಗತಿ ನಡೆಸಲು ಸೂಚಿಸಲಾಗಿದೆ ಎಂದರು.
ಕೋವಿಡ್ ಪರಿಸ್ಥಿತಿ ನೋಡಿಕೊಂಡು ಮುಂದಿನ ದಿನಗಳಲ್ಲಿ 1ರಿಂದ 8ನೇ ತರಗತಿ ಆರಂಭಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದರು.
ಕೋವಿಡ್ ನಿಯಂತ್ರಣ ಸಂಬಂಧ ಉನ್ನತ ಮಟ್ಟದ ತಾಂತ್ರಿಕ ಸಮಿತಿ ಶೀಘ್ರದಲ್ಲೇ ರಚಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

