ಈ ಬಾರಿಯೂ ಸರಳ ದಸರಾ ಆಚರಣೆ -ಸಚಿವ ಎಸ್.ಟಿ.ಎಸ್.

ಮೈಸೂರು: ಕೋವಿಡ್ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲಾಗುವುದು ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಎಚ್.ಡಿ.ಕೋಟೆ ತಾಲ್ಲೂಕಿನ ಬಾವಲಿಯಲ್ಲಿ ಶನಿವಾರ ಸಚಿವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಕಳೆದ ಬಾರಿಯಂತೆಯೇ ಈ ಸಲವೂ ದಸರವನ್ನು ಸರಳವಾಗಿ ಆಚರಿಸಲಾಗುವುದು ಎಂದರು.

ಈ ಸಂಬಂಧ ಮೈಸೂರು ಜಿಲ್ಲಾಡಳಿತ ಸಿದ್ಧಪಡಿಸುವ ರೂಪರೇಷೆಗಳನ್ನು ಮುಖ್ಯಮಂತ್ರಿಗಳ ಅವಗಾಹನೆಗೆ ತಂದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸೋಮಶೇಖರ್ ಹೇಳಿದರು.