ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ವಾರ್ಡ್ ನಂ 36ರ ಉಪಚುನಾವಣೆಗೆ ದಿನಾಂಕ ನಿಗಧಿಯಾಗಿದೆ.
ಸೆ. 3ಕ್ಕೆ ಮೈಸೂರು ಮಹಾನಗರ ಪಾಲಿಕೆಯ ವಾರ್ಡ್ ನಂ 36ಕ್ಕೆ ಉಪಚುನಾವಣೆ ನಡೆಯಲಿದೆ.
ರುಕ್ಷ್ಮಿಣಿ ಮಾದೇಗೌಡ ಪಾಲಿಕೆ ಸದಸ್ಯತ್ವ ಅಸಿಂಧು ಹಿನ್ನೆಲೆ, ರಾಜ್ಯ ಚುನಾವಣಾ ಆಯೋಗ ಚುನಾವಣೆ ದಿನಾಂಕ ನಿಗದಿ ಮಾಡಿದೆ.
ಚುನಾವಣೆ ಸಂದರ್ಭದಲ್ಲಿ ರುಕ್ಷ್ಮಿಣಿ ಮಾದೇಗೌಡ ಅವರು ಸುಳ್ಳು ಅಫಿಡೆವಿಟ್ ಸಲ್ಲಿಸಿದ್ದಾರೆಂದು ಆರೋಪಿಸಿ ಪ್ರತಿಸ್ಪರ್ಧಿ ರಜಿನಿ ಅಣ್ಣಯ್ಯ ಕೋರ್ಟ್ ಮೆಟ್ಟಿಲೇರಿದ್ದರು.
ವಾದ ಪ್ರತಿವಾದ ಆಲಿಸಿದ ಕೋರ್ಟ್ ರುಕ್ಷ್ಮಿಣಿ ಮಾದೇಗೌಡ ಸದಸ್ಯತ್ವ ರದ್ದು ಮಾಡಿ ಆದೇಶ ಹೊರಡಿಸಿತ್ತು.
ಸದಸ್ಯತ್ವ ಅಸಿಂಧುಗೊಂಡ ಹಿನ್ನೆಲೆ ರುಕ್ಷ್ಮಿಣಿ ಮಾದೇಗೌಡ ಅವರು ಮೇಯರ್ ಅಧಿಕಾರ ಕಳೆದುಕೊಂಡಿದ್ದರು.

