ಅಕ್ರಮವಾಗಿ ನಿರ್ಮಾಣವಾಗಿದ್ದ ದೇವಾಲಯ ತೆರವು

ಮೈಸೂರು,ಆ. 13- ನಗರದ ಮೇಟಗಳ್ಳಿ ಪೊಲೀಸ್ ಠಾಣೆ ಬಳಿಯ ಉದ್ಯಾನವನದಲ್ಲಿ  ಅಕ್ರಮವಾಗಿ ನಿರ್ಮಾಣವಾಗಿದ್ದ ದೇವಾಲಯವನ್ನು ಮುಡಾ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

ಮುಡಾ ಅಧಿಕಾರಿಗಳು ಇಂದು ಬೆಳಿಗ್ಗೆ ಕಾರ್ಯಾಚರಣೆ ನಡೆಸಿ, ಮುಡಾ ಜಾಗದಲ್ಲಿ ಫುಟ್ಬಾತ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ನಿರ್ಮಾಣವಾಗಿದ್ದ ದೇವಾಲಯವನ್ನ ತೆರವುಗೊಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆ, ಒತ್ತುವರಿ ತೆರವುಗೊಳಿಸಿ ಜಾಗ ವಶಕ್ಕೆ ಪಡೆಯಲಾಗಿದೆ.

ಪೊಲೀಸ್ ಬಂದೋಬಸ್ತ್ ನಲ್ಲಿ ಮುಡಾ ಸಹಾಯಕ ಆಯುಕ್ತ ಕೃಷ್ಣ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು.