ಸಚಿವ ಸಂಪುಟ ಸಭೆಗೆ ಆನಂದ್ ಸಿಂಗ್ ಗೈರು

ಬೆಂಗಳೂರು: ಸಚಿವ ಆನಂದ್ ಸಿಂಗ್ ಅವರು ಸಚಿವ ಸಂಪುಟ ಸಭೆಗೆ ಗರಾಗಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಆನಂದ್ ಸಿಂಗ್ ಗೈರಾಗಿದ್ದಾರೆ.

ನೂತನ ಸಚಿವರಿಗೆ ಖಾತೆ ಹಂಚಿಕೆಯಾದ ನಂತರ ಸಿಎಂ ಬಸವರಾಜ ಬೊಮ್ಮಾಯಿ ಗುರುವಾರ ವಿಧಾನಸೌಧದಲ್ಲಿ ತಮ್ಮ ಸಹೋದ್ಯೋಗಿಗಳ ಜೊತೆ ಮೊದಲ ಸಭೆ ನಡೆಸಿದ್ದಾರೆ.

ಸಿಕ್ಕಿರುವ ಖಾತೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಹೋಗುವಂತೆ ಈಗಾಗಲೇ ಸಿಎಂ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಆನಂದ್ ಸಿಂಗ್ ಅವರ ಮನವೊಲಿಸಲು ಸಾಕಷ್ಟು ಪ್ರಯತ್ನಿಸಿದ್ದಾರೆ.

ಹೀಗಿದ್ದರೂ ಆನಂದ್ ಸಿಂಗ್ ಇಂದಿನ ಸಭೆಯಲ್ಲಿ ಭಾಗವಹಿಸಿರಲಿಲ್ಲ.

ಈ ಮೂಲಕ ಪ್ರವಾಸೋದ್ಯಮ ಮತ್ತು ಪರಿಸರ ಇಲಾಖೆ ಸಚಿವ ಆನಂದ್ ಸಿಂಗ್ ತಮಗೆ ನೀಡಲಾಗಿರುವ ಖಾತೆ ಬಗ್ಗೆ ಮುನಿಸು ಮುಂದುವರಿಸಿದ್ದಾರೆ.