ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ದಿ ಹಿಂದು ಪತ್ರಿಕೆಯ ಡೆಪ್ಯೂಟಿ ಎಡಿಟರ್ ಆರ್.ಕೃಷ್ಣಕುಮಾರ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಮೈಸೂರಿನ ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟಿಸಿದರು.
ವಿಜಯಕರ್ನಾಟಕ ದಿನಪತ್ರಿಕೆಯ ಹಿರಿಯ ಉಪ ಸಂಪಾದಕ ಹೆಚ್.ಕೆ.ನಾಗೇಶ್ ಅವರಿಗೆ ವರ್ಷದ ಹಿರಿಯ ಉಪ ಸಂಪಾದಕ, ಟೈಮ್ಸ್ ಆಫ್ ಇಂಡಿಯಾದ ಛಾಯಾಗ್ರಾಹಕ ಎಸ್.ಆರ್.ಮಧುಸೂದನ್ ಅವರಿಗೆ ವರ್ಷದ ಹಿರಿಯ ಛಾಯಾಗ್ರಾಹಕ ಪ್ರಶಸ್ತಿ, ಕೆ.ಆರ್.ನಗರದ ಮೈಸೂರು ಮಿತ್ರ ವರದಿಗಾರ ಕೆ.ಟಿ.ರಮೇಶ್ ಅವರಿಗೆ ವರ್ಷದ ಗ್ರಾಮಾಂತರ ಪತ್ರಕರ್ತ ಪ್ರಶಸ್ತಿ, ಪಬ್ಲಿಕ್ ಟಿವಿಯ ವರದಿಗಾರ ಕೆ.ಪಿ.ನಾಗರಾಜ್ ಗೆ ವರ್ಷದ ಹಿರಿಯ ದೃಶ್ಯ ಮಾಧ್ಯಮ ವರದಿಗಾರ ಪ್ರಶಸ್ತಿ, ಪಬ್ಲಿಕ್ ಟಿವಿಯ ಕ್ಯಾಮರಾಮನ್ ಕಾರ್ತಿಕ್ ಗೆ ವರ್ಷದ ಹಿರಿಯ ದೃಶ್ಯ ಮಾಧ್ಯಮ ಕ್ಯಾಮರಾ ಮನ್ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಉದಯವಾಣಿಯ ವರದಿಗಾರ ಸತೀಶ್ ದೇಪುರ ಅವರಿಗೆ ವರ್ಷದ ಕನ್ನಡ ವರದಿಗಾರಿಕೆ ಪ್ರಶಸ್ತಿ, ಹುಣಸೂರಿನ ಪ್ರಜಾವಾಣಿ ವರದಿಗಾರ ಹೆಚ್.ಎಸ್.ಸಚ್ಚಿತ್ ಅವರಿಗೆ ವರ್ಷದ ಕನ್ನಡ ಗ್ರಾಮಾಂತರ ವರದಿ ಪ್ರಶಸ್ತಿ, ಸ್ಟಾರ್ ಆಫ್ ಮೈಸೂರು ಪತ್ರಿಕೆಯ ವರದಿಗಾರ ರಾಜಕುಮಾರ್ ಭಾವಸಾರ್ ಅವರಿಗೆ ವರ್ಷದ ಇಂಗ್ಲಿಷ್ ವರದಿ ಪ್ರಶಸ್ತಿ, ದಿ ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್ ಪತ್ರಿಕೆಯ ಫೆÇೀಟೋಗ್ರಾಫರ್ ಎಸ್.ಉದಯಶಂಕರ್ ಅವರಿಗೆ ವರ್ಷದ ಅತ್ಯುತ್ತಮ ಛಾಯಾಚಿತ್ರ ಪ್ರಶಸ್ತಿ, ದೂರದರ್ಶನದ ವರದಿಗಾರ ಜಿ.ಜಯಂತ್, ಕ್ಯಾಮರಾ ಮನ್ ರಾಮು ಅವರಿಗೆ ವರ್ಷದ ಅತ್ಯುತ್ತಮ ವಿದ್ಯುನ್ಮಾನ ವರದಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಕೂಡ್ಲಿ ಗುರುರಾಜ್, ಸಿ.ಕೆ.ಮಹೇಂದ್ರ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಿ.ಮಹೇಶ್ವರನ್, ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತರಾದ ಈಚನೂರು ಕುಮಾರ್, ಕನ್ನಡಪ್ರಭ ದಿನಪತ್ರಿಕೆ ಸ್ಥಾನಿಕ ಸಂಪಾದಕ ಅಂಶಿ ಪ್ರಸನ್ನಕುಮಾರ್ ಅವರುಗಳನ್ನು ಸನ್ಮಾನಿಸಿಸಲಾಯಿತು.
ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಜಿ.ಹೇಮಂತ್ ಕುಮಾರ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್, ಶಾಸಕ ಎಲ್.ನಾಗೇಂದ್ರ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

