ಮೈಸೂರು ಪೆÇಲೀಸ್ ಇಲಾಖೆಗೆ ಮೇಜರ್ ಸರ್ಜರಿ ಅನಿವಾರ್ಯ -ಸಚಿವ ಎಸ್.ಟಿ. ಸೋಮಶೇಖರ್

ಮೈಸೂರು: ನಗರ ಪೆÇಲೀಸ್ ಇಲಾಖೆಗೆ ಮೇಜರ್ ಸರ್ಜರಿ ಅನಿವಾರ್ಯ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಮೈಸೂರಲ್ಲಿ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧೀಗಳೊಂದಿಗೆ ಸಚಿವರು ಗುರುವಾರ ಮಾತನಾಡಿದರು.

ಮೈಸೂರು ನಗರ ಪೆÇಲೀಸ್ ಆಯುಕ್ತ ಹಾಗೂ ಹಾಗೂ ಡಿಸಿಪಿಗಳ ವರ್ಗಾವಣೆ ಸುಳಿವನ್ನು ಸಚಿವ ಎಸ್.ಟಿ.ಸೋಮಶೇಖರ್ ಅವರು ನೀಡಿದರು.

ನಗರ ಪೆÇಲೀಸ್ ಇಲಾಖೆಗೆ ಮೇಜರ್ ಸರ್ಜರಿ ಅನಿವಾರ್ಯ. ಶೂಟ್ ಔಟ್, ಗ್ಯಾಂಗ್ ರೇಪ್ ಪ್ರಕರಣದಲ್ಲಿ ಪೆÇಲೀಸ್ ನಿರ್ಲಕ್ಷ್ಯ ಎದ್ದುಕಂಡಿದೆ. ಪೆÇಲೀಸ್ ವೈಫಲ್ಯದ ಬಗ್ಗೆ ಜನತೆ ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ. ಸಾರ್ವಜನಿಕರ ಭಾವನೆಗೆ ಸರ್ಕಾರ ಸ್ಪಂದಿಸಬೇಕಾಗುತ್ತದೆ. ಗ್ಯಾಂಗ್ ರೇಪ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಪರಿಶೀಲನೆಗೆ ಎಡಿಜಿಪಿ ಅವರನ್ನೇ ಸರ್ಕಾರ ನಿಯೋಜಿಸಿದೆ ಎಂದು ಎಸ್ ಟಿ ಎಸ್ ತಿಳಿಸಿದರು.

ಎಡಿಜಿಪಿ ವರದಿ ನಂತರ ನಿರ್ಲಕ್ಷ್ಯದ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಬಿಡುವುದಿಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಭರವಸೆ ನೀಡಿದರು.

ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೇಲೆ ಎರಡು ಸೆಕ್ಷನ್ ಗಳ ಅಡಿಯಲ್ಲಿ ಎಫ್‍ಐಆರ್ ದಾಖಲು ಮಾಡಲಾಗಿದೆ ಎಂದು ತಿಳಿಸಿದರು.