ಮೈಸೂರು: ಗ್ಯಾಂಗ್ ರೇಪ್ ಪ್ರಕರಣದ ತನಿಖೆ ಚುರುಕಾಗಿದೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಅವರು ಹೇಳಿದರು.
ಮೈಸೂರಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಗೃಹ ಸಚಿವರು ಮಾತನಾಡಿದರು.
ಗ್ಯಾಂಗ್ ರೇಪ್ ಪ್ರಕರಣದ ತನಿಖೆ ಚುರುಕಾಗಿದೆ. ಯಾವ ಹಂತದಲ್ಲಿ ತನಿಖೆ ನಡೆಯುತ್ತಿದೆ ಎಂದು ಹೇಳಲಾಗುವುದಿಲ್ಲ. ಖಂಡಿತವಾಗಲೂ ಈ ಪ್ರಕರಣವನ್ನು ಭೇದಿಸುತ್ತೇವೆ. ಇನ್ನೂ ಆರೋಪಿಗಳು ಪತ್ತೆಯಾಗಿಲ್ಲ. ಆರೋಪಿಗಳ ಪತ್ತೆಗೆ ಸ್ವಲಸಮಯ ಬೇಕಿದೆ ಎಂದು ತಿಳಿಸಿದರು.
ವಿಚಾರಣೆಗೆ ತೊಂದರೆ ಆಗುವ ದೃಷ್ಟಿಯಿಂದ ನಾನು ಹೆಚ್ಚಿನ ವಿವರ ನೀಡುವುದಿಲ್ಲ. ಸಂತ್ರಸ್ತೆ ತಮ್ಮ ಹೇಳಿಕೆಯನ್ನು ಪೆÇಲೀಸರಿಗೆ ತಿಳಿಸಿಲ್ಲ ಎಂದು ಗೃಹ ಸಚಿವರು ಹೇಳಿದರು.
ನಾನು ಗೃಹ ಸಚಿವನಾದ ಬಳಿಕ ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದಿದ್ದೇನೆ. ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ನನಗೆ, ನಮ್ಮ ಪೆÇಲೀಸ್ ಇಲಾಖೆಗೆ ಶಕ್ತಿಕೊಡುವಂತೆ ದೇವರಲ್ಲಿ ಕೇಳಿಕೊಂಡಿದ್ದು, ಕಾನೂನು ಸುವ್ಯವಸ್ಥೆ ಹತೋಟಿಗೆ ಬರುವಂತೆ ಪ್ರಾರ್ಥಿಸಿದ್ದೇನೆ ಎಂದು ಗೃಹ ಸಚಿವರು ತಿಳಿಸಿದರು.

