ಹುಬ್ಬಳ್ಳಿ : ಕೇರಳ ಗಡಿಯಿಂದ ರಾಜ್ಯಕ್ಕೆ ಕೊರೊನಾ ನಕಲಿ ನಗೆಟಿವ್ ವರದಿ ಪಡೆದು ಜನರು ಆಗಮಿಸುತ್ತಿದ್ದು ಗಡಿಯಲ್ಲಿ ಎಲ್ಲವನ್ನು ತಪಾಸಣೆ ಮಾಡಿ ಬಿಡಲಾಗುತ್ತಿದೆ. ಸುಳ್ಳು ವರದಿ ನೀಡಿ, ನುಸುಳುವವರ ಮೇಲೆ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೂಂದಿಗೆ ಸಿಎಂ ಮಾತನಾಡಿದರು.
ಕೇರಳ ಗಡಿಯಿಂದ ರಾಜ್ಯಕ್ಕೆ ಕೊರೊನಾ ನಕಲಿ ನಗೆಟಿವ್ ವರದಿಯನ್ನು ಪಡೆದು ಜನರು ಆಗಮಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಗಡಿಯಲ್ಲಿ ಎಲ್ಲವನ್ನು ತಪಾಸಣೆ ಮಾಡಿ ಬಿಡಲಾಗುತ್ತಿದೆ. ಸುಳ್ಳು ವರದಿ ನೀಡಿ, ನುಸುಳುವವರ ಮೇಲೆ ಕ್ರಮಕ್ಕೆ ಮುಂದಾಗುತ್ತೇವೆ ಎಂದರು.
ಸೆಪ್ಟೆಂಬರ್ ೫ ರಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಸಾಮಾನ್ಯ ಜನತೆಯ ಮೇಲೆ ಹೊರೆ ಆಗಿರುವ ಸಿಲಿಂಡರ್ ಹಾಗೂ ತೈಲ ಬೆಲೆ ಏರಿಕೆ ವಿಚಾರವಾಗಿ ಅವರೊಂದಿಗೆ ಮಾತನಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗಿದೆ. ಸಿಲಿಂಡರ್, ತೈಲ ಬೆಲೆ ಏರಿಕೆ ಕುರಿತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಜೊರೆ ಚರ್ಚಿಸುತ್ತೇನೆ ಎಂದು ಅವರು ತಿಳಿಸಿದರು.
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಪ್ರಾಥಮಿಕ ಶಾಲೆ ಆರಂಭ ವಿಚಾರ ಕುರಿತು ತಿಳಿಸಿದ ಅವರು ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದರು.

