ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಬಾರದು ಎಂದು ಆರೋಗ್ಯ ಇಲಾಖೆ ಹೇಳಿದ್ದ ಮೇಲೂ ‘ಕೆಲʼ ಒತ್ತಡಗಳಿಗೆ ಮಣಿದ ರಾಜ್ಯ ಸರಕಾರ ಕೊನೆಯೂ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಿದೆ.
ಐದು ದಿನಗಳ ಗಣೇಶೋತ್ಸವಕ್ಕೆ ಅನುಮತಿ ನೀಡಿರುವ ಸರಕಾರವು, ಕೋವಿಡ್ ಸೋಂಕು ಇರುವ ಜಿಲ್ಲೆಗಳಲ್ಲೂ ವಿನಾಯಕ ಚತುರ್ಥಿಗೆ ಅವಕಾಶ ನೀಡಿದೆ.
ಭಾನುವಾರ ಸಂಜೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಹಬ್ಬದ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡುವಂತಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಸಭೆಯ ಬಳಿಕ ತಿಳಿಸಿದರು.
ಐದು ದಿನ ಮಾತ್ರ ಗಣೇಶೋತ್ಸವಕ್ಕೆ ಅವಕಾಶ ನೀಡಿರುವ ಸರಕಾರವು, ಸ್ಥಳೀಯ ಪೊಲೀಸ್ ಇಲಾಖೆ & ಸ್ಥಳೀಯ ಆಡಳಿತ ಸಂಸ್ಥೆಗಳು ಹೇಳುವ ಎಲ್ಲ ನಿಯಮ, ಷರತ್ತುಗಳನ್ನು ಕಡ್ಡಾಯವಾಗಿ ಪಾಳಿಸಬೇಕು. ಆದರೆ, ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿಷೇಧ ವಿಧಿಸಲಾಗಿದೆ.

