ಮೈಸೂರು: ಮೈಸೂರು ಮಹಾನಗರ ಪಾಲಿಕೆಯ 36ನೇ ವಾರ್ಡ್ ನ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಜಿನಿ ಅಣ್ಣಯ್ಯ ಭರ್ಜರಿ ಜಯ ಸಾಧಿಸಿದ್ದಾರೆ.
ರಜಿನಿ ಅಣಯ್ಯ ಮತ್ತು ಜೆಡಿಎಸ್ ನ ಲೀಲಾವತಿ ನಡುವೆ ತೀವ್ರ ಪೈಪೆÇೀಟಿ ನಡೆದು, ಅಂತಿಮವಾಗಿ ರಜಿನಿ ಅಣಯ್ಯ ಅವರು ಗೆಲುವು ಸಾಧಿಸಿದ್ದಾರೆ.
ಮೈಸೂರು ಮಹಾನಗರ ಪಾಲಿಕೆ ವಾರ್ಡ್ ನಂ. 36ರ ಉಪಚುನಾವಣೆಯ ಫಲಿತಾಂಶ ಸೋಮವಾರ ಹೊರ ಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ರಜನಿ ಅಣ್ಣಯ್ಯ 4,113 ಮತಗಳನ್ನ ಪಡೆದು ಜಯಭೇರಿ ಸಾಧಿಸಿದ್ದಾರೆ.
ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ನ ಅಭ್ಯರ್ಥಿ ಲೀಲಾವತಿಗೆ 2116 ಮತಗಳನ್ನು ಪಡೆದು ಸೋಲನುಭವಿಸಿದ್ದರೆ, ಬಿಜೆಪಿ ಅಭ್ಯರ್ಥಿ ಶೋಭಾ ಅವರು ಕೇವಲ 601 ಮತಗಳನ್ನು ಪಡೆದು 3ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.
ಮಾಜಿ ಮೇಯರ್ ರುಕ್ಮಿಣಿ ಮಾದೇಗೌಡ ಅವರ ಪಾಲಕೆ ಸದಸ್ಯತ್ವ ರದ್ದಾದ್ದರಿಂದ ವಾರ್ಡ್ ನಂ. 36ಕ್ಕೆ ಉಪಚುನಾವಣೆ ನಡೆದಿತ್ತು.
ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯ ಸಾಧಿಸಿದ್ದು, ಜೆಡಿಎಸ್ ಗೆ ಮುಖಭಂಗ ಆದಂತಾಗಿದೆ.

