ಬೆಂಗಳೂರು: ದೇವಾಲಯಗಳ ತೆರವು ವಿಚಾರದಲ್ಲಿ ಜನರ ಭಾವನೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಹೇಳಿದರು.
ಬೆಂಗಳೂರಲ್ಲಿ ಮಂಗಳವಾರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ದೇಗುಲ, ಧಾರ್ಮಿಕ ವಿಷಯಗಳಲ್ಲಿ ಜನರಿಗೆ ಭಾವನಾತ್ಮಕ ಸಂಬಂಧ ಇರುತ್ತದೆ. ಜನರ ಭಾವನೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಮಾಡದೆ ಜನರ ಭಾವನೆಗೆ ನೋವಾಗದಂತೆ ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು.
ಯಾವುದೇ ದೇಗುಲ, ಚರ್ಚ್, ಮಸೀದಿ ತೆರವಿಗೂ ಮುನ್ನ ಅಲ್ಲಿನ ಸ್ಥಳೀಯ ಜನಪ್ರತಿನಿಧಿಗಳ ಜತೆ ಚರ್ಚಿಸಿ ನಿರ್ಧಾರ ಕೈಗೊಂಡರೇ ಗೊಂದಲ ಸೃಷ್ಠಿಯಾಗಲ್ಲ ಎಂದು ಸಾ.ರಾ ಮಹೇಶ್ ಹೇಳಿದರು.

