ಯಾದಗಿರಿ: ತಜ್ಞರ ಸಲಹೆ ಮೇರೆಗೆ 1ನೇ ತರಗತಿ ಶಾಲೆ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.
ಯಾದಗಿರಿಯ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಶುಕರವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ನಂತರ ಮಾಧ್ಯಮ ಪ್ತಿನಿಧಿಗಳೊಂದಿಗೆ ಮಾತನಾಡಿದರು.
ಅಧಿವೇಶನ ನಂತರ ಶಿಕ್ಷಣ ತಾಂತ್ರಿಕ ತಜ್ಞರ ಸಲಹೆ ಮೇರೆಗೆ 1ನೇ ತರಗತಿಯಿಂದ ಶಾಲೆ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಬಿ.ಸಿ. ನಾಗೇಶ್ ಅವರು ತಿಳಿಸಿದರು.
ಕೋವಿಡ್ 3ನೇ ಅಲೆ ತಡೆಗಾಗಿ ಜಿಲ್ಲೆಯಲ್ಲಿ ಜನತೆಗೆ 60 ಪ್ರತಿಷತ ವ್ಯಾಕ್ಸಿನೇಷನ್ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ವ್ಯಾಕ್ಸಿನೇಷನ್ ಮಾಡಿಸುವುದಾಗಿ ಹೇಳಿದರು.
ಪ್ರಾಥಮಿಕ ಶಿಕ್ಷಣವು ಕಡ್ಡಾಯವಾಗಿ ಮಾತೃ ಭಾಷೆಯಲ್ಲಿಯೇ ಆಗಬೇಕು ಎಂದವರು ತಿಳಿಸಿದರು.
ಜಿಲ್ಲೆಯಲ್ಲಿ ಗ್ರಾಮಾಂತರ ಪ್ರದೇಶಕ್ಕೆ ಬಸ್ಸಿನ ಸೌಕರ್ಯದ ಕೊರತೆ ನಮ್ಮ ಗಮನಕ್ಕೆ ಬಂದಿದ್ದು, ಹಳೆಯ ರೂಟ್‍ಗಳನ್ನು ಆರಂಭಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ, ಬಸ್ ಪಾಸ್ ಸೌಲಭ್ಯವು ಎಲ್ಲಾ ವಿದ್ಯಾರ್ಥಿಗಳಿಗೆ ದೊರೆಯುವಂತೆಯೂ ತಿಳಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಈಗಲೂ ಮತ್ತು ಈ ಹಿಂದೆ ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ಅವಧಿಯಲ್ಲಿ ಪಠ್ಯ ಪುಸ್ತಕಗಳಲ್ಲಿನ ಲೋಪದೋಷಗಳ ಕುರಿತು ಆರೋಪಗಳು ಕೇಳಿಬಂದಿವೆ ಅವೆಲ್ಲವನ್ನು ಸರಿಪಡಿಸಲು ಆಧ್ಯತೆ ಮೇರೆಗೆ ಕ್ರಮ ಕೈಳ್ಳಲಾಗುವುದು ಎಂದರು.

