ಕ್ಯಾಪ್ಟನ್ ಅಭಿಮನ್ಯು ಗಜ ಪಡೆಗೆ ಭಾರ ಹೊರಿಸಿ ತಾಲೀಮು

ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜ ಪಡೆಗೆ ಸೋಮಾವಾರದಿಂದ ಭಾರ ಹೊರಿಸಿ ತಾಲೀಮು ನಡೆಸಲಾಯಿತು.

ದಸರಾದ ಆಕರ್ಷಣೆ ಬಿಂದು ಜಂಬೂ ಸವಾರಿ ಆದಿನ ಗಜರಾಜ ಅಭಿಮನ್ಯು 750 ಕೆಜಿ ಯೂಕದ ಚಿನ್ನದ ಅಂಬಾರಿಯಲ್ಲಿ ದೇವಿ ಚಾಮುಂಡೇಶ್ವರಿಯ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಳ್ಳಬೇಕು. ಈ ಹಿನ್ನೆಲೆಯಲ್ಲಿ ಇಂದಿನಿಂದ ಗಜಪಡೆಗೆ ಭಾರ ಹೊರಿಸುವ ತಾಲೀಮು ಆರಂಭಿಸಲಾಯಿತು.

ಮೈಸೂರು ಅರಮನೆ ಆವರಣದಲ್ಲಿ ಆನೆಗಳಿಗೆ ಪೂಜೆ ಸಲ್ಲಿಸಿ, ನಂತರ ಅಭಿಮನ್ಯು ನೇತೃತ್ವದ ಆನೆಗಳಿಗೆ ಮರಳಿನ ಮೂಟೆ ಹೊರಿಸಿ ತಾಲೀಮು ನಡೆಸಲಾಯಿತು.
ಮುದಲ ದಿನವಾದ ಸೋಮವಾರ 300 ಕೆಜಿ ತೂಕದ ಮರಣಿನ ಮೂಟೆ ಹುರಿಸಿ ತಾಲೀಮು ನಡೆಸಲಾಯಿತು.

ಅಭಿಮನ್ಯು, ಧನಂಜಯ, ಗೋಪಾಲಸ್ವಾಮಿ, ಅಶ್ವತ್ಥಾಮ ವಿಕ್ರಮ ಆನೆಗಳಿಗೆ ಮರಳಿನ ಮೂಟೆ ಹೊರಿಸಿ ಅರಮನೆ ಆವರಣದಲ್ಲಿ ತಾಲೀಮು ನಡೆಸಲಾಯಿತು.

ಡಿಸಿಎಫ್ ಕರಿಕಾಳನ್, ವೈದ್ಯ ರಮೇಶ್ ಅರಮನೆ, ಎಸಿಪಿ ಚಂದ್ರಶೇಖರ್ ಸೇರಿ ಹಲವು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.