ಮೈಸೂರು: ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಗಜ ಪಡೆ ಕ್ಯಾಪ್ಟನ್ ಅಭಿಮನ್ಯುವಿಗೆ ಮರದ ಅಂಬಾರಿ ಹೊರಿಸಿ ತಾಲೀಮು ನಡೆಸಲಾಯಿತು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಶುಕ್ರವಾರ ಮರದ ಅಂಬಾರಿ ತಾಲೀಮಿಗೆ ಚಾಲನೆ ನೀಡಿದರು.
ವಿಶ್ವವಿಖ್ಯಾತ ದಸರಾ ಸಂಭ್ರಮ 2021ಕ್ಕೆ ಇಂದಿನಿಂದ ಅಂತಿಮ ಹಂತದ ತಾಲೀಮು ಆರಂಭವಾಗಿದ್ದು, ಕ್ಯಾಪ್ಟನ್ ಅಭಿಮನ್ಯುಗೆ ಮರದ ಅಂಬಾರಿ ಹೊರಿಸಿ ತಾಲೀಮು ನಡೆಸಲಾಗಿದೆ.
ಮೈಸೂರು ಅರಮನೆ ಅಂಗಳದಲ್ಲಿ ಮರದ ಅಂಬಾರಿಗೆ ಸಾಂಪ್ರದಾಯಿಕ ಪೂಜೆ ಯನ್ನು ಡಿಸಿಎಫ್ ಕರಿಕಾಳನ್ ನೆರವೇರಿಸಿದರು. ಅಂಬಾರಿ ಮಾದರಿಯ ಮರದ ಅಂಬಾರಿ ಜೊತೆಗೆ ಮರಳು ಮೂಟೆಗಳನ್ನು ಹೊತ್ತು ಅಭಿಮನ್ಯು ಸಾಗಿದ್ದಾನೆ.
ಜಂಬೂಸವಾರಿ ಮೆರವಣಿಗೆಯಲ್ಲಿ 750 ಕೆ.ಜಿ ತೂಕದ ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊರಲಿದ್ದಾನೆ.
ಅಭಿಮನ್ಯು ಜೊತೆ ಕಾವೇರಿ, ಚೈತ್ರಾ, ಲಕ್ಷ್ಮಿ ಗೋಪಾಲಸ್ವಾಮಿ ಧನಂಜಯ ಅಶ್ವತ್ಥಾಮ ವಿಕ್ರಮ ಸಾಥ್ ನೀಡಿದರು.

