ದಸರಾ ಪ್ರಯುಕ್ತ ಕೆಎಸ್ ಆರ್ ಟಿಸಿಯಿಂದ 1 ಸಾವಿರ ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು: ದಸರಾ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 1 ಸಾವಿರ ಹೆಚ್ಚುವರಿ ವಿಶೇಷ ಬಸ್‍ಗಳ ವ್ಯವಸ್ಥೆ ಮಾಡಿದೆ.

ಬೆಂಗಳೂರು ನಗರದಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಈ ಬಸ್‍ಗಳು ಸಂಚಾರಿಸಲಿವೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅ. 13ರಿಂದ 21ರ ವರೆಗೆ ಹೆಚ್ಚುವರಿ ಬಸ್‍ಗಳು ಸಂಚರಿಸಲಿವೆ.

ಹೆಚ್ಚುವರಿ ವಿಶೇಷ ಬಸ್‍ಗಳು ಬೆಂಗಳೂರು ನಗರದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‍ಗೆ ಸಂಚರಿಸಲಿದೆ.

ಅಂತರರಾಜ್ಯದ ತಿರುಪತಿ, ಕೊಟ್ಟಾಯಂ, ಚೆನ್ನೈ, ಕೊಯಮತ್ತೂರು, ಪುಣೆ, ಪಣಜಿ ಮುಂತಾದ ಸ್ಥಳಗಳಿಗೆ ಬಸ್‍ಗಳು ಸಂಚಾರ ನಡೆಸಲಿವೆ.

ಹೆಚ್ಚುವರಿ ವಿಶೇಷ ಬಸ್‍ಗಳ ದರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕೆಎಸ್ ಆರ್ ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಎಸ್‍ಆರ್‍ಟಿಸಿ ವೆಬ್‍ಸೈಟ್ ಮತ್ತು ಕರ್ನಾಟಕ ಮತ್ತು ಅಂತರರಾಜ್ಯದಲ್ಲಿರುವ ಗಣಕೀಕೃತ ಬುಕಿಂಗ್ ಕೌಂಟರ್‍ಗಳ ಮೂಲಕ ಹೆಚ್ಚುವರಿ ವಿಶೇಷ ಬಸ್ ಗಳ ಆಸನಗಳನ್ನು ಕಾಯ್ದಿರಿಸಬಹುದು.