ಬಾಗಲಕೋಟೆ: ತಪ್ಪು ಯಾರೇ ಮಾಡಿದ್ದರೂ ಅದು ತಪ್ಪೇ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ಬಾಗಲಕೋಟೆಯಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಆಪ್ತನ ಮನೆ ಮೇಲೆ ಐಟಿ ದಾಳಿ ವಿಚಾರಕ್ಕೆ ಸಂಬಂಧ ಸಚಿವ ಈಶ್ವರಪ್ಪ ಪ್ರತಿಕ್ರಿಯಿಸಿ, ತಪ್ಪು ಯಾರೇ ಮಾಡಿದ್ದರೂ ಅದು ತಪ್ಪೇ ಎಂದು ತಿಳಿಸಿ, ತಪ್ಪು ಮಾಡಿದ್ದರೆ ಶಿಕ್ಷೆ ಅನುಭವಿಸುತ್ತಾರೆ. ತಪ್ಪು ಮಾಡಿಲ್ಲ ಅಂದರೆ ಹೊರ ಬರುತ್ತಾರೆ ಎಂದವರು ಹೇಳಿದರು.
ಬಿಎಸ್ ವೈ ಅವರೇ ನನ್ನ ಆಪ್ತ ಎಂದಿದ್ದಾರೆ. ದಾಳಿ ಆಗಿದೆ ಅಂದರೆ ತಪ್ಪು ಮಾಡಿದ್ದಾರೆ ಅಂತ ಅಲ್ಲ. ಬಿಎಸ್ ವೈ ಬಗ್ಗೆ ಅನುಮಾನ ಪಡೋದು ಸರಿಯಲ್ಲ ಎಂದರು.
ಕಾಂಗ್ರೆಸ್ ನಾಯಕರನ್ನು ಮಾತ್ರ ಗುರಿಯಾಗಿಸಿ ಐಟಿ ದಾಳಿ ಆರೋಪ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎಸ್ ಈಶ್ವರಪ್ಪ, ಕಾಂಗ್ರೆಸ್ ಮೇಲಷ್ಟೇ ಐಟಿ ದಾಳಿ ಮಾಡುತ್ತಾರೆ ಎಂದಿದ್ದರು. ಈಗ್ಯಾಕೆ ಮಾತನಾಡುತ್ತಿಲ್ಲ. ಯಾರೇ ಆದರೂ ತಪ್ಪು ಮಾಡಿದರೆ ಕ್ರಮ ಕೈಗೊಳ್ಳುತ್ತಾರೆ. ಇಲ್ಲ ಅಂದರೆ ಇಲ್ಲ. ಯಾರ ಮೇಲೆ ಅನುಮಾನ ಬರುತ್ತೋ ಅವರ ಮೇಲೆ ದಾಳಿ ಮಾಡುತ್ತಾರೆ. ಇದಕ್ಕೆ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿ ದಾಳಿ ಎನ್ನೋದು ಸರಿಯಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಈಶ್ವರಪ್ಪ ಒತ್ತಾಯಿಸಿದರು.

