ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾ ಮಹೋತ್ಸವ ಗುರುವಾರದಿಂದ ಆರಂಭವಾಗಿದ್ದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನವರಾತ್ರಿ ಉತ್ಸವ ಪ್ರತಿದಿನ ದೇವಿಗೆ ವಿಶೇಷ ಪೂe,É ಅಲಂಕಾರ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಶುಕ್ರವಾರ (ಅ. 8)ದಿಂದ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ಬೆಳಿಗ್ಗೆ 7 ಗಂಟೆಯಿಂದ ಸಂಜೆ 6ಗಂಟೆವರೆಗೆ ಮಾತ್ರ ದೇವಿ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ನವರಾತ್ರಿ ಅಂಗವಾಗಿ ವಿವಿಧ ಧಾರ್ಮಿಕ ಅಚರಣೆಗಳು ನಡೆಯಲಿದ್ದು, ನವರಾತ್ರಿಯ 2ನೇ ದಿನವಾದ ಶುಕ್ರವಾರ ತಾಯಿ ಚಾಮುಂಡೇಶ್ವರಿ ದೇವಿಗೆ ಮಹೇಶ್ವರಿ ಅಲಂಕಾರ ಮಾಡಲಾಗಿದೆ.
ಇದೇ ರೀತಿ ಪ್ರತಿ ದಿನವೂ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿ ವಿವಿಧ ಆಲಂಕಾರದಲ್ಲಿ ಕಂಗೊಳಿಸಲಿದ್ದು ಸಾರ್ವಜನಿಕರು ವೀಕ್ಷಿಸಬಹುದಾಗಿದೆ.

