ವಿದ್ಯುತ್ ದೀಪಾಲಂಕಾರವನ್ನು ಒಂಬತ್ತು ದಿನಗಳವರೆಗೆ ವಿಸ್ತರಣೆ -ಸಿ.ಎಂ

ಮೈಸೂರು: ವಿದ್ಯುತ್ ದೀಪಾಲಂಕಾರವನ್ನು 9  ದಿನಗಳವರೆಗೆ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದರು.

 ಮೈಸೂರಿನ  ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ  ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಿಎಂ ಅವರು ಶುಕ್ರವಾರ ಮಾತನಾಡಿದರು.

ನಾಡಿನ ವಿವಿಧ ಕಡೆಗಳಿಂದ ಪ್ರವಾಸಿಗರು ದೊಡ್ಡ ಪ್ರಮಾಣದಲ್ಲಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಜನಪ್ರತಿನಿಧಿಗಳು ಮತ್ತು ಜನತೆಯ ಬೇಡಿಕೆಯ ಮೇರೆಗೆ ವಿದ್ಯುತ್ ದೀಪಾಲಂಕಾರವನ್ನು ವಿಸ್ತರಿಸುತ್ತಿರುವುದಾಗಿ ತಿಳಿಸಿದರು.