ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿ ರಥೋತ್ಸವ

ಮೈಸೂರು,ಅ.19- ಚಾಮುಂಡಿ ಬೆಟ್ಟದಲ್ಲಿ ಮಂಗಳವಾರ ನಢ ಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಿಯ ರಥೋತ್ಸವವು ಸಾಂಪ್ರದಾಯಿಕವಾಗಿ ಸಂಭ್ರಮದಿಂದ ನೆರವೇರಿತು.

ಬೆಳಿಗ್ಗೆ 7.18ರಿಂದ 7.45ರ ಶುಭ ಲಗ್ನದಲ್ಲಿ ಜರುಗಿದ ರಥೋತ್ಸವಕ್ಕೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚಾಲನೆ ನೀಡಿದರು.

ನಸುಕಿನಿಂದಲೇ ದೇಗುಲದ ಒಳಗೆ ಅರ್ಚಕರು ವಿವಿಧ ಧಾರ್ಮಿಕ ಕೈಂಕರ್ಯಗಳನ್ನು ನಡೆಸಿದರು. ನಂತರ ಮಂಟಪೆÇೀತ್ಸವ, ಹಂಸವಾಹನ, ಸಿಂಹವಾಹನೋತ್ಸವವು ನಡೆಯಿತು.

ಪ್ರಧಾನ ಅರ್ಚಕರಾದ ಡಾ. ಶಶಿಶೇಖರ್ ದೀಕ್ಷಿತ್ ಸಾಂಪ್ರದಾಯಿಕ ಪೂಜಾ ಕಾರ್ಯಗಳೊಂದಿಗೆ ರಥೋತ್ಸವ ವಿಧಿವಿಧಾನ ನಡೆಸಿಕೊಟ್ಟರು.

ತ್ರಿಷಿಕಾಕುಮಾರಿ ಒಡೆಯರ್, ರಾಜಮಾತೆ ಪ್ರಮೋದಾದೇವಿ ಒಡೆಯರ್, ಶಾಸಕ ಎಲ್.ನಾಗೇಂದ್ರ, ಮೇಯರ್ ಸುನಂದಾ ಪಾಲನೇತ್ರ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.

ಚಾಮುಂಡೇಶ್ವರಿ ದೇವಿ ರಥೋತ್ಸವಕ್ಕೆ ಸಹಸ್ರಾರು ಭಕ್ತರು ಬೆಟ್ಟಕ್ಕಾಗಮಿಸಿ ಕಣ್ತುಂಬಿಕೊಳ್ಳುತ್ತಿದ್ದರು. ಆದರೆ ಈ ಬಾರಿಯೂ ಕಳೆದ ಬಾರಿಯಂತೆ ಕೊರೊನಾ ಹಿನ್ನೆಲೆಯಲ್ಲಿ ಸರಳ ಮತ್ತು ಸಾಂಪ್ರದಾಯಿಕ ರಥೋತ್ಸವ ನಡೆಸಲಾಯಿತು.

ಬೆಳಗಿನ ಜಾವ 4ಗಂಟೆಯಿಂದ 10ಗಂಟೆಯವರೆಗೆ ಚಾಮುಂಡಿಬೆಟ್ಟಕ್ಕೆ ಭಕ್ತರು ಬರುವುದನ್ನು ನಿಷೇಧಿಸಲಾಗಿತ್ತು.

ಅ. 21ರಂದು ತೆಪೆÇ್ಪೀತ್ಸವ ನಡೆಯಲಿದೆ.