ಅ. 25ರಿಂದ 1ರಿಂದ 5ನೇ ತರಗತಿ ಆರಂಭಿಸಲು ನಿರ್ಧಾರ

ಬೆಂಗಳೂರು: ಅ. 25ರಿಂದ 1ರಿಂದ 5ನೇ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಈಗಾಗಲೇ 6ರಿಂದ ಮೇಲ್ಪಟ್ಟ ತರಗತಿಗಳು ಆರಂಭವಾಗಿದ್ದು, ದಸರಾ ಬಳಿಕ 1ರಿಂದ 5ನೇ ತರಗತಿ ಆರಂಭಿಸುವ ಬಗ್ಗೆ ತೀರ್ಮಾನಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಈಗ ಅ. 25ರಿಂದ ರಾಜ್ಯದಲ್ಲಿ 1ರಿಂದ 5ನೇ ತರಗತಿ ಆರಂಭಿಸಲು ಸರ್ಕಾರ ನಿರ್ಧರಿಸಿದೆ.

ಪ್ರಾಥಮಿಕ ಶಾಲೆ ಆರಂಭಿಸಲು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಮ್ಮತಿ ನೀಡಿದ್ದು, ಶಾಲೆ ಆರಂಭಕ್ಕೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಮಕ್ಕಳನ್ನು ಶಾಲೆಗೆ ಕಳುಹಿಸಲು ಪೆÇೀಷಕರ ಅನುಮತಿ ಕಡ್ಡಾಯವಾಗಿದೆ. ಶಾಲೆಗೆ ಮಕ್ಕಳ ಹಾಜರಿ ಕಡ್ಡಾಯವಲ್ಲ. ಶಿಕ್ಷಕರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು.