ಹುಬ್ಬಳ್ಳಿ: ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಅಂತ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಂಗಳವಾರ ನಳೀನ್ ಕುಮಾರ್ ಕಟೀಲ್ ಮಾತನಾಡಿದರು.
ರಾಹುಲ್ ಗಾಂಧಿ ಒಬ್ಬ ಡ್ರಗ್ ಅಡಿಕ್ಟ್, ಪೆಡ್ಲರ್ ಅಂತಾ ವರದಿ ಇದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದರು.
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ನಡುವೆ ಪೈಪೆÇೀಟಿ ಇದೆ. ಅವರಿಗೆ ಅವರ ಪಕ್ಷವನ್ನೇ ಮುನ್ನಡೆಸಲು ಆಗುತ್ತಿಲ್ಲ. ಇನ್ನು ದೇಶವನ್ನ ಮುನ್ನಡೆಸುತ್ತಾರಾ ಎಂದು ಕಟೀಲ್ ಪ್ರಶ್ನಿಸಿದ್ದಾರೆ.
ನಮ್ಮ ಪ್ರಧಾನಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಂದ್ರೆ ಸಿದ್ಧರಾಮಯ್ಯ ಸಾಬರ್ ಕ ಸಾಥ್ ಸಾಬರ್ ಕಾ ವಿಕಾಸ್ ಅಂತಾರೆ. ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ನಳೀನ್ ಕುಮಾರ್ ಕಟೀಲ್ ಟೀಕಿಸಿದರು.

