ಬೆಳಗಾವಿ: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ದ ಅದ್ದೂರಿ ಮೆರವಣಿಗೆ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಳಗಾವಿಯಲ್ಲಿ ಬುಧವಾರ ಸಿಎಂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಇಲ್ಲಿನ ಕನ್ನಡ ಸಂಘಟನೆಗಳ ಬೇಡಿಕೆ ನನ್ನ ಗಮನಕ್ಕೆ ಬಂದಿದೆ. ತಜ್ಞರೊಂದಿಗೆ ಸಮಾಲೋಚನೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.
ರಾಜ್ಯದಲ್ಲಿ ನಡೆಯುತ್ತಿರುವ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ಮೂರು ದಿನಗಳ ಕಾಲ ಹಾನಗಲ್ ನಲ್ಲಿ ಉಳಿದುಕೊಂಡು ಪ್ರಚಾರ ಮಾಡುತ್ತೇನೆ. 23ರಂದು ಬೆಳಗಾವಿಗೆ ಬಂದು ಕಿತ್ತೂರು ಚೆನ್ನಮ್ಮ ಉತ್ಸವದಲ್ಲಿ ಭಾಗಿಯಾಗುತ್ತೇನೆ ಎಂದು ಮುಖ್ಯಮತ್ರಿಗಳು ತಿಳಿಸಿದರು.

