ಬೆಂಗಳೂರು: ಶುಕ್ರವಾರ ಹೃದಯಾಘಾತದಿಂದ ನಿಧನರಾದ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು (ಶನಿವಾರ) ಸಂಜೆಯೇ ನಡೆಯಲಿದೆ.
ನಟ ಪುನೀತ್ ರಾಜ್ ಕುಮಾರ್ ಅವರ ಪುತ್ರಿ ಸಂಜೆ 4 ಗಂಟೆ ವೇಳೆಗೆ ಬೆಂಗಳೂರಿಗೆ ಆಗಮಿಸಲಿದ್ದು ಈ ಹಿನ್ನೆಲೆಯಲ್ಲಿ ಇಂದು ಸಂಜೆಯೇ ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನೆರವೇರಲಿದೆ.
ಈ ಕುರಿತು ಮಾಹಿತಿ ನೀಡಿದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಇಂದು ಸಂಜೆಯೇ ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಪಾರ್ಥೀವ ಶರೀರದ ಮೆರವಣಿಗೆ ಪ್ರಾರಂಭವಾಗಲಿದ್ದು 5 ರಿಂದ 5.30ರ ವೇಳೆಗೆ ಕಂಠೀರವ ಸ್ಟುಡಿಯೋಗೆ ಮೆರವಣಿಗೆ ತೆರಳಲಿದೆ.
ಪುನೀತ್ ರಾಜ್ ಕುಮಾರ್ ಅವರ ಪುತ್ರಿ ಬರುವವರೆಗೆ ಪೂಜೆ ಮಾಡಲಾಗುತ್ತದೆ. ನಂತರ ಅಂತಿಮ ವಿಧಿ ವಿಧಾನ ನೆರವೇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಕಂಠೀರವ ಸ್ಟೇಡಿಯಂನಲ್ಲಿ ಅಪ್ಪು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ನಡೆದಿದೆ ಎಂದವರು ಹೇಳಿದರು.
ಪುನೀತ್ ಪಾರ್ಥೀವ ಶರೀರವನ್ನು ಕಂಠೀರವ ಸ್ಟುಡಿಯೋಕ್ಕೆ ತೆಗೆದುಕೊಂಡು ಬರಲು ಮಾರ್ಗ ನಿರ್ಧಾರವಾಗಿದೆ. ಕಂಠೀರವ ಸ್ಟೇಡಿಯಂನಿಂದ ಕಾಪೆರ್Çೀರೇಷನ್, ಮೈಸೂರ್ ಬ್ಯಾಂಕ್ ಸರ್ಕಲ್, ಚಾಲುಕ್ಯ ಸರ್ಕಲ್, ಕಾವೇರಿ ಜಂಕ್ಷನ್, ಸ್ಯಾಂಕಿ, ಗೋವರ್ಧನ, ಗೊರಗುಂಟೆ ಪಾಳ್ಯದ ಮೂಲಕ ಕಂಠೀರವ ಸ್ಟುಡಿಯೋಕ್ಕೆ ಅಂತಿಮ ಯಾತ್ರೆ ಸಾಗಲಿದೆ ಎಂದು ರಾಕ್ ಲೈನ್ ವೆಂಕಟೇಶ್ ತಿಳಿಸಿದ್ದಾರೆ.

