ಹಾನಗಲ್: ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಜಯ ಗಳಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ತನ್ನ ಸಮೀಪದ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ ಅವರಿಗಿಂತ 7,373 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಶ್ರೀನಿವಾಸ ಮಾನೆ 87,490 ಮತಗಳನ್ನು ಪಡೆದರೆ, ಶಿವರಾಜ್ ಸಜ್ಜನರಗೆ 80,117 ಮತಗಳು ಸಿಕ್ಕಿವೆ. ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ 927 ಮತಗಳನ್ನು ಪಡೆದಿದ್ದಾರೆ.
ಶ್ರೀನಿವಾಸ ಮಾನೆ ಅವರ ಗೆಲುವಿನಿಂದ ತವರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತೀವ್ರ ಮುಖಭಂಗವಾದಂತಾಗಿದೆ.

