ಹುಬ್ಬಳ್ಳಿ: ಉಪ ಚುನಾವಣೆಯ ಸೋಲಿನ ಪರಾಮರ್ಶೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಹಾನಗಲ್ ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾದ ವಿಚಾರ ಕುರಿತು ಸಿಎಂ ಪ್ರತಿಕ್ರಿಯಿಸಿ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಮಾಡಿದ್ದೇವೆ. ಸೋಲಿನ ಹೊಣೆಯನ್ನು ಎಲ್ಲರೂ ಸಾಮೂಹಿಕವಾಗಿ ಹೊರುತ್ತೇವೆ ಎಂದು ಹೇಳಿದರು.
ನಮ್ಮ ಕೇಂದ್ರದ ನಾಯಕ ಅಮಿತ್ ಶಾ ನನ್ನ ಹೆಸರು ಹೇಳಿದಾಗಲೇ ಹೇಳಿದ್ದೆ. ನಾನು ಒಬ್ಬ ತಂಡ ಮುಖ್ಯಸ್ಥ ಇರಬಹುದು, ಆದರೂ ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ಮಾಡುತ್ತೇವೆ ಎಂದಿದ್ದೆ ಎಂದರು.
ಈ ಬಾರಿ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಲು ತೀರ್ಮಾನಿಸಲಾಗಿದೆ. ಆದರೆ ದಿನಾಂಕ ನಿಗದಿಯಾಗಿಲ್ಲ, 8ನೇ ತಾರೀಖು ಸಚಿವ ಸಂಪುಟದ ಸಭೆ ನಡೆಯಲಿದೆ. ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಸಿಎಂ ತಿಳಿಸಿದರು.
ಭತ್ತ ಬೆಳೆಯುವ ರಾಯಚೂರು, ಕೊಪ್ಪಳ ಭಾಗ ಸೇರಿದಂತೆ ರಾಜ್ಯದ ರೈತರಿಂದ ಭತ್ತ ಖರೀದಿ ಕೇಂದ್ರ ಆರಂಭಿಸಿ ಎಂಬ ಬೇಡಿಕೆ ಇತ್ತು. ಎಂಎಸ್ ಪಿ ದರದಲ್ಲಿ ಭಕ್ತ ಖರೀದಿಸಲು ಸರ್ಕಾರದ ತೀರ್ಮಾನಿಸಿದೆ ಎಂದು ಸಿಎಂ ಹೇಳಿದರು.
ಭತ್ತ ಖರೀದಿ ಪ್ರಕ್ರಿಯೆ ಆರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ದೀಪಾವಳಿ ಮುಗಿದ ತಕ್ಷಣ ಭತ್ತ ಖರೀದಿ ಆರಂಭಿಸಲಾಗುವುದು. ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಸಂಪುಟ ಉಪ ಸಮಿತಿಯಲ್ಲಿ ತೀರ್ಮಾನ ಮಾಡಲಾಗುವುದೆಂದು ಮುಖ್ಯಮಂತ್ರಿಗಳು ತಿಳಿಸಿದರು.

