ಹುಬ್ಬಳ್ಳಿ: ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 7 ರೂ. ಇಳಿಕೆಗೆ ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ತೈಲ ಬೆಲೆ ಇಳಿಕೆಯಿಂದ ಸರ್ಕಾರದ ಬೊಕ್ಕಸಕ್ಕೆ 2100 ಕೋಟಿ ಹೊರೆಯಾಗಲಿದೆ ಎಂದು ಹೇಳಿದ ಸಿಎಂ ಅವರು, ಅದನ್ನೆಲ್ಲ ಪರಿಶೀಲಿಸಿ ಇಂದು ಸಂಜೆ (ಗುರುವಾರ)ಯಿಂದ ಬೆಲೆ ಇಳಿಕೆ ಜಾರಿಯಾಗಲಿದೆ ಎಂದು ತಿಳಿಸಿದರು.
ಜನವರಿ 26ರಿಂದ ರಾಜ್ಯಾದ್ಯಂತ ಜನಸೇವಕ ಯೋಜನೆ ಜಾರಿಯಾಗಲಿದೆ ಎಂದು ಸಿಎಂ ಹೇಳಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ ಅವರು, ಹೈಕಮಾಂಡ್ ನಿಂದ ನನಗೆ ಬುಲಾವ್ ಬಂದಿಲ್ಲ. ನಾನು ದೆಹಲಿಗೆ ಹೋಗಲ್ಲ, ಸಂಪುಟ ವಿಸ್ತರಣೆ ಸಧ್ಯಕ್ಕಿಲ್ಲ ಎಂದರು.
ಬಿಟ್ ಕ್ವಾಯಿನ್ ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಆಗ್ರಹ ವಿಚಾರ ಕುರಿತು ಮುಖ್ಯಮಂತ್ರಿಗಳು, ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದೇನೆ ಎಂದರು.

