ಕೇದಾರನಾಥದಲ್ಲಿ ಶ್ರೀ ಶಂಕರಾಚಾರ್ಯರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

ಡೆಹ್ರಾಡೂನ್‌: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಉತ್ತರಾಖಂಡದ ಕೇದಾರನಾಥದಲ್ಲಿ ಶ್ರೀ ಆದಿಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ ಕೇದಾರನಾಥ ತಲುಪಿ  ಶಿವನಿಗೆ ಪೂಜೆ ಸಲ್ಲಿಸಿ ನಂತರ ಕೇದಾರನಾಥದಲ್ಲಿ ಶ್ರೀ ಆದಿಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಿದರು.

2013ರಲ್ಲಿ ಉತ್ತರಾಖಂಡದಲ್ಲಿ ಭಾರೀ ಪ್ರವಾಹ ಉಂಟಾದ ಸಂದರ್ಭದಲ್ಲಿ ಶಂರಾಚಾರ್ಯರ ಪ್ರತಿಮೆಯು ನಾಶವಾಗಿತ್ತು. ಈ ಹಿನ್ನೆಲೆಯಲ್ಲಿ ಆದಿ ಗುರು ಶಂಕರಾಚಾರ್ಯರ ಪ್ರತಿಮೆಯನ್ನು ಪ್ರಧಾನಿ ಕಾರ್ಯಾಲಯ ನಿರ್ಮಾಣ ಮಾಡಲು ಸೂಚಿಸಿತ್ತು. ಮೈಸೂರಿನ ಖ್ಯಾತ ಶಿಲ್ಪಿ ಯೋಗಿರಾಜ್ ಈ ಪ್ರತಿಮೆಯನ್ನು ನಿರ್ಮಿಸಿದ್ದಾರೆ. ಪ್ರತಿಮೆಯು ಸುಮಾರು 12 ಅಡಿಗಳ ಎತ್ತರವಿದೆ.

ಕೇದಾರನಾಥದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಧಾನಿ ಮೋದಿ ಪರಿಶೀಲನೆ ನಡೆಸಿದರು.