ಮೈಸೂರು: ನಟ ಪುನೀತ್ ರಾಜ್ ಕುಮಾರ್ ಅವರ ಪುಣ್ಯಸ್ಮರಣೆ ಅಂಗವಾಗಿ ಮಯೂರ ಕನ್ನಡ ಯುವಕರ ಬಳಗದ ವತಿಯಿಂದ ಮೈಸೂರಿನ ಚಾಮರಾಜ ಜೋಡಿರಸ್ತೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಕಿರಿಯ ಶಾಲಾಯ ಮಕ್ಕಳಿಗೆ ಪುಸ್ತಕ ಹಾಗೂ ಓದುವ ಸಾಮಗ್ರಿಗಳನ್ನು ವಿತರಿಸುವ ಮೂಲಕ ವಿದ್ಯಾದಾನ ಶ್ರೇಷ್ಠ ದಾನ ಎನ್ನುವ ಕಾರ್ಯಕ್ಕೆ ಚಾಲನೆ ನೀಡಲಾಯಿತು
ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಾಡಪ್ರಭು ಕೆಂಪೇಗೌಡ ಸಹಕಾರಿ ಸಂಘದ ಅಧ್ಯಕ್ಷ ಸಿ ಜಿ ಗಂಗಾಧರ, ಯುವಜನರಿಗೆ ಸ್ಫೂರ್ತಿಯಾಗಿದ್ದ ಪುನೀತ್ ರಾಜ್‍ಕುಮಾರ್ ಭೌತಿಕವಾಗಿ ಕಣ್ಮರೆಯಾಗಿದ್ದಾರೆ. ಆದರೆ ತಮ್ಮ ಸಮಾಜಮುಖಿ ಕೆಲಸಗಳಿಂದ, ಕೋಟ್ಯಂತರ ಯುವಕರ ಪಾಲಿನ ಆದರ್ಶವಾಗಿದ್ದಾರೆ. ಕರ್ನಾಟಕ ಸರ್ಕಾರವು ಯುವಜನರಿಗೆ ಸ್ಫೂರ್ತಿ ತುಂಬಲು, ಪುನೀತ್ ಅವರ ಕೆಲಸಗಳನ್ನು ಗುರುತಿಸಲು ಪುನೀತ್ ಹೆಸರಿನಲ್ಲಿ ‘ಕರ್ನಾಟಕ ಯುವರತ್ನ’ ಪ್ರಶಸ್ತಿಯನ್ನು ಸ್ಥಾಪಿಸಬೇಕು ಎಂದು ಅವರು ಆಗ್ರಹಿಸಿದರು.
ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷ ಶ್ರೀನಾಥ್ ಬಾಬು ಮಾತನಾಡಿ, ಚಿತ್ರನಟ ಪುನೀತ್ ರಾಜ್‍ಕುಮಾರ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಅಪ್ಪು ಮಾದರಿಯಲ್ಲಿ ದೇಹದಾನ ಮಾಡಲು ಯುವಕರು ಮುಂದಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ ಜಿ ರಾಘವೇಂದ್ರ, ಲೋಕೇಶ್ ಎಸ್ ಎನ್ ರಾಜೇಶ್, ಪಾಂಡು ನಾರಾಯಣ, ಕಿಶೋರ್ ಕುಮಾರ್,ಕಿರಣ್, ಶೇಖರ್ ಹಾಗೂ ಇನ್ನಿತರರು ಹಾಜರಿದ್ದರು.

