ನವದೆಹಲಿ: ಕರ್ನಾಟಕದ ಬಿಜೆಪಿ ಸರ್ಕಾರ ಬಿಟ್‍ಕಾಯಿನ್ ಹಗರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಅವರು ಆರೋಪಿಸಿದರು.
ಸುರ್ಜೇವಾಲಾ ಅವರು ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಪ್ರಧಾನಿ ಮೋದಿ ಅವರು 760 ದಶಲಕ್ಷ ಅಮೆರಿಕನ್ ಡಾಲರ್ ಮೊತ್ತದ ಈ ಹಗರಣದ ಸಮಗ್ರ ತನಿಖೆಗೆ ಆದೇಶ ನೀಡುವ ಬದಲು ಈ ಕುರಿತ ಆರೋಪ ನಿರ್ಲಕ್ಷಿಸಿ ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹೇಳುವ ಮೂಲಕ ಇಡೀ ಹಗರಣವನ್ನೇ ಮುಚ್ಚಿಹಾಕುತ್ತಿದ್ದಾರೆಂದರು.
ಕದ್ದ ಬಿಟ್‍ಕಾಯಿನ್‍ಗಳನ್ನು ಹ್ಯಾಕರ್ ಆರೋಪಿ ಶ್ರೀಕೃಷ್ಣನ ವ್ಯಾಲೆಟ್‍ನಿಂದ ವರ್ಗಾಯಿಸಲಾಗಿದೆಯೇ ಎಂಬುದನ್ನು ಬಹಿರಂಗಪಡಿಸುವಂತೆ ಬೊಮ್ಮಾಯಿ ಸರ್ಕಾರಕ್ಕೆ ಸುರ್ಜೇವಾಲ ಆಗ್ರಹಿಸಿದರು.
ಪೆÇಲೀಸ್ ವ್ಯಾಲೆಟ್‍ಗೆ ವರ್ಗಾಯಿಸಲಾಗಿದೆ ಎಂದು ಹೇಳಲಾದ 31 ಮತ್ತು 186 ಬಿಟ್‍ಕಾಯಿನ್‍ಗಳು ಕಳೆದುಹೋಗಿವೆ ಅಥವಾ ನಕಲಿ ವಹಿವಾಟು ಎಂದು ಕಂಡುಬಂದಿದೆ ಎಂದು ಬೆಂಗಳೂರು ಪೆÇಲೀಸರು ಹೇಗೆ ಹೇಳುತ್ತಾರೆ ಎಂದು ಅವರು ಪ್ರಶ್ನಿಸಿದರು.

