ಸಂಸದ ಪ್ರತಾಪ್ ಸಿಂಹ ಕ್ಷಮೆಗೆ ನವೀನ್ ಕುಮಾರ್ ಆಗ್ರಹ

ಮೈಸೂರು: ಬಿಟ್ ಕಾಯಿನ್ ಹಗರಣ ಕುರಿತು ಗಂಭೀರವಾಗಿ ಆರೋಪ ಮಾಡಿರುವ ಶಾಸಕ ಪ್ರಿಯಾಂಕ ಖರ್ಗೆ ಅವರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ವೈಯುಕ್ತಿಕ ಟೀಕೆ ಮಾಡುವ ಮೂಲಕ ಕೀಳು ಮಟ್ಟದ ರಾಜಕೀಯದಿಂದ ತಮ್ಮ ಸಣ್ಣತನ ತೋರಿಸಿದ್ದಾರೆ ಎಂದು ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು ಸಂಸದ ಪ್ರತಾಪ್ ಸಿಂಹ ಅವರು ಪ್ರಿಯಾಂಕ ಖರ್ಗೆ ಅವರ ಹೆಸರು ಗಂಡೋ ಅಥವಾ ಹೆಣ್ಣೋ ಎಂಬುದು ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ. ನಿಜಕ್ಕೂ ಇದು ಅವರ ಸಂಸ್ಕöÈತಿ ಎಂತಹದ್ದು ಎಂಬುದು ಮತ್ತೊಮ್ಮೆ ನಾಡಿನ ಜನರ ಮುಂದೆ ಸಾಬೀತಾಗಿದೆ ಎಂದು ಅವರು ಟೀಕಿಸಿದ್ದಾರೆ.

ಒಬ್ಬ ಜವಾಬ್ದಾರಿಯುತ ಸಂಸದರಾಗಿ ಈ ರೀತಿ ಮಾತನಾಡುವುದು ಸರಿಯಲ್ಲ . ಬಿಟ್ ಕಾಯಿನ್ ಕುರಿತಂತೆ ಶಾಸಕ ಪ್ರಿಯಾಂಕ ಖರ್ಗೆ ಅವರ ಪ್ರಶ್ನೆಗೆ ಉತ್ತರಿಸಲು ಆಗುತ್ತಿಲ್ಲ, ಹೀಗಾಗಿ ವೈಯುಕ್ತಿಕ ಟೀಕೆ ಮಾಡುವ ಮೂಲಕ ಬಿಜೆಪಿ ಸಂಸದರು ತೇಜೋವಧೆ ಮಾಡಲು ಮುಂದಾಗಿದ್ದಾರೆAದು ಹೇಳಿದ್ದಾರೆ.

ಸಂಸದ ಪ್ರತಾಪ್ ಸಿಂಹ ಅವರು ಕೂಡಲೇ ಶಾಸಕ ಪ್ರಿಯಾಂಕ ಖರ್ಗೆ ಅವರ ಬಳಿ ಬಹಿರಂಗ ಕ್ಷಮಾಪಣೆ ಕೋರಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಮಾಡಲು ಮುಂದಾಗುತ್ತೇವೆ ಎಂದು ಎಚ್ಚರಿಸಿದ್ದಾರೆ.