ದಿ. ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ -ಸಿಎಂ ಘೋಷಣೆ

ಬೆಂಗಳೂರು:  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಂಗಳವಾರ ಪುನೀತ್ ನಮನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಈ ಘೋಷಣೆ ಮಾಡಿದರು.

ಡಾ.ರಾಜ್ ಕುಮಾರ್ ಸ್ಮಾರಕದಂತೆಯೇ ಅಪ್ಪು ಸ್ಮಾರಕ ನಿರ್ಮಾಣ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಾನು ಬಾಲ್ಯದಿಂದ ಪುನೀತ್ ರಾಜ್ ಕುಮಾರ್ ರನ್ನು ನೋಡಿದ್ದೇನೆ. ರಾಜ್ ಕುಮಾರ್ ಅವರ ವಿನಯ ಅಪ್ಪುನಲ್ಲಿ ಕಾಣುತ್ತಿದ್ದವು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.