ಬಿಡಿಎ ಭ್ರಷ್ಟಾಚಾರದಲ್ಲಿ ಭಾಗಿಯಾದವರ ವಿರುದ್ಧ ಕ್ರಮ -ಸಿಎಂ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಭ್ರಷ್ಟಾಚಾರದಲ್ಲಿ ಭಾಗಿಯಾದವರ ವಿರುದ್ಧ ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.


ಬೆಂಗಳೂರಿನಲ್ಲಿ ಸಿಎಂ ಭಾನುವಾರ ಮಾಧ್ಯಮ ಪ್ರತಿನಿಧೀಗಳೊಂದಿಗೆ ಮಾತನಾಡಿದರು.

ತಮ್ಮ ಸರ್ಕಾರ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ಕೊಡಲ್ಲ ಎಂದು ಹಿಂದೆಯೇ ಹೇಳಿದ್ದೆ. ಈಗಲೂ ಅಷ್ಟೆ ಬಿಡಿಎನಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.


ಬಿಡಿಎಯ ಮೇಲೆ ದಾಳಿ ನಡೆಸಿ ಭ್ರಷ್ಟಾಚಾರ ಪತ್ತೆಹಚ್ಚಿರುವ ಎಸಿಬಿ ನೀಡುವ ವರದಿ, ಶಿಫಾರಸ್ಸು ಅನ್ವಯ ಕ್ರಮ ನಿಶ್ಚಿತ. ಯಾವುದೇ ಅಧಿಕಾರಿ ತಪ್ಪಿತಸ್ಥ ಇದ್ದರೂ ಕ್ರಮಕೈಗೊಳ್ಳುತ್ತೇವೆ. ಹಿಂದೆ ಇದ್ದ ಅಧಿಕಾರಿಗಳಿರಬಹುದು, ಈಗಿರುವ ಅಧಿಕಾರಿಗಳಿರಬಹುದು ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.