ಹಿರಿಯ ವಿದ್ವಾಂಸ ಕೆ.ಎಸ್.ನಾರಾಯಣಾಚಾರ್ಯ ವಿಧಿವಶ

ಬೆಂಗಳೂರು: ರಾಮಾಯಣಾಚಾರ್ಯ ಎಂದೇ ಪ್ರಸಿದ್ಧಿ ಹೊಂದಿದ್ದ, ಹಿರಿಯ ವಿದ್ವಾಂಸರಾದ ಕೆ.ಎಸ್.ನಾರಾಯಣಾಚಾರ್ಯ ಅವರು ವಿಧಿವಶರಾಗಿದ್ದಾರೆ.

ಅವರಿಗೆ 88 ವರ್ಷ ವಯಸ್ಸಾಗಿತ್ತು. ಧರ್ಮಶಾಸ್ತ್ರ ಪ್ರಚಾರದ ಮೂಲಕ ಅವರು ಪ್ರಸಿದ್ದರಾಗಿದ್ದರು.

ಕನ್ನಡದ ಭಾರತೀಯ ಸಂಸ್ಕೃತಿಯ ಲೇಖಕರು,ಪ್ರಚಾರಕರು ಮತ್ತು ಪ್ರವಚನಕಾರರಾಗಿದ್ದರು.

1933 ರಲ್ಲಿ ಕನಕಪುರದ ವೈದಿಕ ಅವರು ಕುಟುಂಬದಲ್ಲಿ ಜನಿಸಿದ್ದರು. ಬೇಂದ್ರೆಯವರಿಂದ ಪ್ರೇರಣೆಗೊಳಗಾಗಿ ಪ್ರವಚನಗಳಿಂದ ಲೇಖನದೆಡೆಗೂ ಮುಖ ಮಾಡಿದ್ದರು.

ಕೆ. ಎಸ್.ನಾರಾಯಣಾಚಾರ್ಯ ಅವರು ಮೈಸೂರು ವಿಶ್ವ ವಿದ್ಯಾನಿಲಯದಿಂದ ಬಿ.ಎಸ್.ಸಿ, ಬಿ.ಎ (ಆನರ್ಸ್) ಎಂ.ಎ(ಇಂಗ್ಲಿಷ್) ಮತ್ತು ಪಿ.ಹೆಚ್.ಡಿ ಪದವಿಗಳನ್ನು ಸಹ ಪಡೆದಿದ್ದರು.

ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಪ್ರವಚಕ ,ಪ್ರಾಧ್ಯಾಪಕ ಮತ್ತು ಕಾಲೇಜಿನ ಪ್ರಾಚಾರ್ಯರಾಗಿ ಅವರು ಕಾರ್ಯ ನಿರ್ವಹಿಸಿದ್ದರು.

ಇವರ ಸಾಹಿತ್ಯ ಸೇವೆಗೆ ರಾಜ್ಯ ಸಾಹಿತ್ಯ ಅಕಾಡೆಮಿ ಮತ್ತು ಕಾರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳು ಲಭಿಸಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಟ್ವೀಟರ್ ಮುಖಾಂತರ ನಾರಾಯಣಾಚಾರ್ಯ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.