ನವದೆಹಲಿ: ಡಿಸೆಂಬರ್ ಒಂದರಿಂದ ಸರ್ಕಾರಿ ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ ಗಳ ಬೆಲೆಯನ್ನು ಏರಿಸಿದ್ದು,
ಜನ ಸಾಮಾನ್ಯರ ಮೇಲೆ ಹಣದುಬ್ಬರದ ಪ್ರಭಾವ ಹೆಚ್ಚುತ್ತಲೇ ಇದೆ.
ಬುಧವಾರದಿಂದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 100 ರೂ. ಏರಿಕೆಯಾಗಿದೆ.
ಕಳೆದ ತಿಂಗಳು ವಾಣಿಜ್ಯ ಬಳಕೆಯ ಸಿಲಿಂಡರ್ 266 ರೂಪಾಯಿಗಳಷ್ಟು ದುಬಾರಿಯಾಗಿತ್ತು. ಈಗ ಮತ್ತೆ ದರ ಏರಿಕೆಯಾಗಿರುವುದರಿಂದ ವಾಣಿಜ್ಯ ಸಿಲಿಂಡರ್ ಬಳಕೆದಾರರಿಗೆ ಶಾಕ್ ಆಗಿದೆ.
ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಗಳ (ಎಲ್‍ಪಿಜಿ ಬೆಲೆ) ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅಂದರೆ ಎಲ್‍ಪಿಜಿಗೆ ಹಳೆಯ ದರಗಳನ್ನು ಮಾತ್ರ ಪಾವತಿಸಬೇಕಾಗುತ್ತದೆ.

