ಮೈಸೂರು: ಹಾಡಿ ನಿವಾಸಿ ಮೇಲೆ ಗುಂಡು ಹಾರಿಸಿದ ಪ್ರಕರಣ ಈಗ ಹೊಸ ತಿರುವು ಪಡೆದಿದೆ.
ಗಂಧದ ಮರ ಕಳವು ಮಾಡಲು ಬಂದಾಗ ಗುಂಡು ಹಾರಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟ ಪಡಿಸಿದ್ದಾರೆ.
ಇತ್ತೀಚೆಗೆ ರಾಣಿ ಗೇಟು ಜೇನು ಕುರುಬರ ಹಾಡಿ ಸಮೀಪ ಘಟನೆ ನಡೆದಿತ್ತು ಆ ಸಂದರ್ಭದಲ್ಲಿ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಾಡಿ ನಿವಾಸಿ ಬಸವ ಎಂಬಾತ ಗುಂಡೇಟಿನಿಂದ ಗಾಯಗೊಂಡಿದ್ದ.
ಜಮೀನಿಗೆ ಬಹಿರ್ದೆಸೆಗೆ ಹೋಗಿದ್ದಾಗ ಅರಣ್ಯ ಇಲಾಖೆ ವಾಚ್ ಮನ್ ಸುಬ್ರಮಣಿ ಸೇರಿ ಮೂವರುಗುಂಡು ಹಾರಿಸಿ ಕೊಲೆಗೆ ಯತ್ನಿಸಿದ್ದರು ಎಂದು ಆರೋಪ ಮಾಡಲಾಗಿತ್ತು.
ಈ ಸಂಬಂಧ ಬೈಲುಕುಪ್ಪೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ಮಾಧ್ಯಮ ಪ್ರಕಟಣೆ ಮೂಲಕ ಅರಣ್ಯ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ನೀಡಿ, ದೊಡ್ಡಹರವೆ ಮೀಸಲು ಅರಣ್ಯ ಪ್ರದೇಶದಲ್ಲಿ ಮೂರು ಮಂದಿ ಗಂಧದ ಮರ ಕತ್ತರಿಸುತ್ತಿದ್ದರು. ಆ ಸಂದರ್ಭದಲ್ಲಿ ಅವರನ್ನು ಹಿಡಿಯಲು ನಮ್ಮ ಸಿಬ್ಬಂದಿ ಪ್ರಯತ್ನ ಮಾಡಿದರು,ಆದರೆ ಆ ಚೋರರು ಪ್ರತಿ ದಾಳಿ ಮಾಡಿದ್ದಾರೆ. ಆತ್ಮ ರಕ್ಷಣೆಗಾಗಿ ಸಿಬ್ಬಂದಿ ಗುಂಡು ಹರಿಸಿದ್ದಾರೆ. ಆಗ ಆರೋಪಿಗೆ ಗುಂಡು ತಗುಲಿ ಗಾಯವಾಗಿದೆ. ಉಳಿದ ಇಬ್ಬರು ಆರೋಪಿಗಳಾದ ದಿಲೀಪ, ಸತೀಶ್ ಪರಾರಿಯಾಗಿದ್ದಾರೆ. ಗಾಯಗೊಂಡ ಆರೋಪಿಯನ್ನು ಇಲಾಖಾ ಸಿಬ್ಬಂದಿಗಳೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

