ಮೈಸೂರು: ನರ್ಸಿಂಗ್ ವಿದ್ಯಾರ್ಥಿಗಳ ಒಮಿಕ್ರಾನ್ ವರದಿ ನೆಗೆಟಿವ್ ಬಂದಿದೆ ಎಂದು ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕೆ. ಎಚ್. ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ಹೊಸ ತಳಿ ಒಮಿಕ್ರಾನ್ ವೈರಸ್ ಕರ್ನಾಟಕಕ್ಕೂ ಕಾಲಿಟ್ಟಾಗಿದೆ. ಬೆಂಗಳೂರಿನ ಇಬ್ಬರಿಗೆ ಒಮಿಕ್ರಾನ್ ಸೋಂಕು ತಗುಲಿದ್ದು ಸಾಕಷ್ಟು ಭೀತಿ ಉಂಟಾಗಿದೆ.ಈ ಸಂದರ್ಭದಲ್ಲಿ ಮೈಸೂರಿನಲ್ಲಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದ್ದರಿಂದ ಆತಂಕ ಉಂಟಾಗಿತ್ತು. ಸಧ್ಯ ಅವರ ಒಮಿಕ್ರಾನ್ ವರದಿ ನೆಗೆಟಿವ್ ಬಂದಿರುವುದರಿಂದ ಸಧ್ಯಕ್ಕೆ ಆತಂಕ ತಪ್ಪಿಂತಾಗಿದೆ.
ನರ್ಸಿಂಗ್ ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದ ಬಳಿಕ ಎಲ್ಲರ ಸ್ಯಾಂಪಲ್ ಅನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕೆ. ಎಚ್. ಪ್ರಸಾದ್ ಸ್ಪಷ್ಟ ಪಡಿಸಿದ್ದು, ಸದ್ಯ ಆತಂಕ ದೂರವಾಗಿದೆ.

